ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗಿಗೆ ಅನ್ಯಾಯವಾಗಿದ್ದರೂ ಪ್ರತಾಪ ಸಿಂಹ ಜಾಣಮೌನ: ಅಪ್ಪಚ್ಚು ರಂಜನ್‌ ವಾಗ್ದಾಳಿ

Last Updated 6 ಆಗಸ್ಟ್ 2021, 12:38 IST
ಅಕ್ಷರ ಗಾತ್ರ

ಮಡಿಕೇರಿ: ಶಾಸಕ ಎಂ.ಪಿ.ಅಪ್ಪಚ್ಚು ರಂಜನ್‌ ಅವರು ಜಿಲ್ಲೆಯಲ್ಲೇ ಇದ್ದರೂ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಗೆ ಬಂದಿರಲಿಲ್ಲ.

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅವರು ಸಭೆಗೆ ಗೈರಾಗಿದ್ದರು ಎಂಬ ಮಾತುಗಳು ಕೇಳಿಬರುತ್ತಿವೆ. ಅವರು ನೆಲ್ಯಹುದಿಕೇರಿಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದರು.

ಸುದ್ದಿಗಾರರೊಂದಿಗೆ ಮಾತನಾಡಿದ ರಂಜನ್‌, ‘ಜಿಲ್ಲಾವಾರು ಹಾಗೂ ಸಾಮಾಜಿಕ ನ್ಯಾಯದ ಪ್ರಕಾರ ಸಚಿವ ಸ್ಥಾನ ಸಿಗುವ ನಿರೀಕ್ಷೆಯಿತ್ತು. ಆದರೆ, ಹಿರಿಯರನ್ನು ವರಿಷ್ಠರು ಕಡೆಗಣಿಸಿದ್ದಾರೆ’ ಎಂದು ಅಸಮಾಧಾನ ಹೊರಹಾಕಿದರು.

‘ಕೆಲವು ಜಿಲ್ಲೆಗೆ ಮೂರು ಸಚಿವ ಸ್ಥಾನ ನೀಡಲಾಗಿದೆ. ಇದು ಸರಿಯಾದ ಕ್ರಮವೇ’ ಎಂದು ಪ್ರಶ್ನಿಸಿದರು.

‘ಕೊಡಗಿಗೆ ಅನ್ಯಾಯವಾಗಿದ್ದರೂ ಸಂಸದ ಪ್ರತಾಪ ಸಿಂಹ ಮೌನವಾಗಿದ್ದಾರೆ. ಅವರದ್ದು ಜಾಣ ಮೌನ. ಅವರು ಒತ್ತಡ ಹಾಕಬೇಕಿತ್ತು. ಲೋಕಸಭೆ ಚುನಾವಣೆ ವೇಳೆ ಎರಡು ವಿಧಾನಸಭಾ ಕ್ಷೇತ್ರದಿಂದ 80 ಸಾವಿರ ಮತ ಲೀಡ್‌ ಕೊಡಿಸಿದ್ದೆವು. ಅವರ ಮೌನ ಬೇಸರ ತರಿಸಿದೆ’ ಎಂದು ವಾಗ್ದಾಳಿ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT