ಮಂಗಳವಾರ, ಫೆಬ್ರವರಿ 7, 2023
25 °C

ಭತ್ತ, ರಾಗಿ ಖರೀದಿ ಕೇಂದ್ರ ತೆರೆಯಲು ಶಾಸಕ ದಿನೇಶ್‌ ಗೂಳಿಗೌಡ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಪ್ರಸಕ್ತ ಸಾಲಿನ (2022-23) ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಯೋಜನೆಯಡಿ ಮಂಡ್ಯ ಜಿಲ್ಲೆಯಲ್ಲಿ ಭತ್ತ ಮತ್ತು ರಾಗಿ ಖರೀದಿ ಕೇಂದ್ರ ಸ್ಥಾಪಿಸಬೇಕು ಹಾಗೂ ಬೆಳೆ ಮಾರಾಟ ಮಿತಿ ತೆಗೆದುಹಾಕಬೇಕು’ ಎಂದು ಆಗ್ರಹಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವಿಧಾನ ಪರಿಷತ್‌ ಸದಸ್ಯ ದಿನೇಶ್‌ ಗೂಳಿಗೌಡ ಮನವಿ ಸಲ್ಲಿಸಿದ್ದಾರೆ.

‘ಪ್ರಸಕ್ತ ಸಾಲಿನಲ್ಲಿ ಮಂಡ್ಯ ಜಿಲ್ಲೆಯಲ್ಲಿ ಸುಮಾರು 81,459 ಹೆಕ್ಟೇರ್ ಪ್ರದೇಶದಲ್ಲಿ ಭತ್ತದ ಬೆಳೆ ಕಟಾವಿಗೆ ಬಂದಿದೆ. 50 ಲಕ್ಷ ಕ್ವಿಂಟಲ್ ಉತ್ಪಾದನೆ ಅಂದಾಜಿದೆ. ಸರ್ಕಾರ ಈವರೆಗೂ ಖರೀದಿ ಕೇಂದ್ರ ಆರಂಭ ಅಥವಾ ಬೆಂಬಲ ಬೆಲೆ ನಿಗದಿ ಹಾಗೂ ಒಬ್ಬ ರೈತನಿಂದ ಎಷ್ಟು ಕ್ವಿಂಟಲ್ ಭತ್ತ ಖರೀದಿಸಲಾಗುತ್ತದೆ ಎಂಬುದನ್ನು ತಿಳಿ
ಸಿಲ್ಲ. ಅಲ್ಲದೆ, ಮಂಡ್ಯ ಜಿಲ್ಲೆಯಲ್ಲಿ ಸುಮಾರು 50 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ರಾಗಿ ಬೆಳೆಯಲಾಗಿದ್ದು, 10 ಲಕ್ಷಕ್ಕೂ ಹೆಚ್ಚು ಕ್ವಿಂಟಲ್ ರಾಗಿ ಬೆಳೆ ಅಂದಾಜಿಸಲಾಗಿದೆ. ಆದರೆ, ಖರೀದಿ ಕೇಂದ್ರ ತೆರೆದಿಲ್ಲ. ವಿಳಂಬವಾದರೆ ಮಧ್ಯವರ್ತಿಗಳ ಕಪಿಮುಷ್ಟಿಗೆ ಸಿಲುಕಿ ಕಡಿಮೆ ಬೆಲೆಗೆ ಭತ್ತ ಮತ್ತು ರಾಗಿಯನ್ನು ಮಾರಾಟ ಮಾಡಿ ನಷ್ಟಕ್ಕೆ ಒಳಗಾಗುವ ಸಾಧ್ಯತೆ ಇದೆ’ ’ ಎಂದು ಮನವಿಯಲ್ಲಿ ಅವರು ಉಲ್ಲೇಖಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.