ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಶಾಲಾ ವಾಹನ ಖರೀದಿಗೆ ಶಾಸಕರ ನಿಧಿ

Last Updated 3 ಜುಲೈ 2022, 19:30 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರಿ ಶಾಲೆ ಗಳಲ್ಲಿ ಮಕ್ಕಳನ್ನು ಕರೆದೊಯ್ಯಲು ಶಾಲಾ ವಾಹನ ಖರೀದಿಗೆ ಶಾಸಕರ ಸ್ಥಳೀಯ ಪ್ರದೇಶಾಭಿ ವೃದ್ಧಿ ನಿಧಿ ಬಳಸಲು ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ. ಅದಕ್ಕೆ ಪೂರಕವಾಗಿ ಶಾಸಕರ ನಿಧಿ ಬಳಕೆಗೆ ಸಂಬಂಧಿಸಿದ ಮಾರ್ಗಸೂಚಿಯನ್ನೂ ಪರಿಷ್ಕರಿಸಲಾಗಿದೆ.

ಆದರೆ, ಶಾಲಾ ವಾಹನದ ಚಾಲಕರ ವೇತನ, ಪೆಟ್ರೋಲ್‌ ಅಥವಾ ಡೀಸೆಲ್‌, ದುರಸ್ತಿ ವೆಚ್ಚಕ್ಕೆ ಶಾಸಕರ ನಿಧಿ ಬಳಸಲು ಅವಕಾಶ ಇಲ್ಲ. ಈ ಮೊತ್ತವನ್ನು ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯು (ಎಸ್‌ಡಿಎಂಸಿ) ಇತರ ಅನುದಾನದಿಂದ ಭರಿಸಬೇಕು ಎಂದೂ ಸ್ಪಷ್ಟಪಡಿಸಲಾಗಿದೆ.

2022–23ನೇ ಸಾಲಿನ ಬಜೆಟ್‌ ಘೋಷಣೆಯಂತೆ, ಶೀಘ್ರದಲ್ಲಿ ಹೋಬಳಿ ಮಟ್ಟದಲ್ಲಿ ಸುಮಾರು 200 ಶಾಲೆಗಳನ್ನು ‘ಮಾದರಿ ಶಾಲೆ’ಗಳಾಗಿ ಮೇಲ್ದರ್ಜೆಗೇರಿಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಈ ಶಾಲೆಗಳಲ್ಲಿ ಮಕ್ಕಳನ್ನು ಉಚಿತವಾಗಿ ಕರೆದೊಯ್ಯಲು ಶಾಲಾ ವಾಹನ ಖರೀದಿಸಲು ಚಿಂತನೆ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT