ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಎಸ್‌ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ

Last Updated 3 ಮಾರ್ಚ್ 2023, 11:23 IST
ಅಕ್ಷರ ಗಾತ್ರ

ಬೆಂಗಳೂರು: ಲಂಚ ಪ್ರಕರಣದಲ್ಲಿ ತಮ್ಮ ಮಗ ಪ್ರಶಾಂತ್ ಮಾಡಾಳ್ ಬಂಧನದ ಬೆನ್ನಲ್ಲೇ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಕೆಎಸ್ ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಗುರುವಾರ ನಡೆದ ಲೋಕಾಯುಕ್ತ ದಾಳಿಗೂ ನನಗೂ ಯಾವುದೇ ಸಂಬಂಧವಿಲ್ಲ. ಇದು ನನ್ನ ಮತ್ತು ನನ್ನ ಕುಟುಂಬದ ವಿರುದ್ಧ ನಡೆದಿರುವ ಷಡ್ಯಂತ್ರವಾಗಿದೆ. ಆದರೂ ನನ್ನ ಮೇಲೆ ಆರೋಪ ಬಂದಿರುವುದರಿಂದ ನೈತಿಕ ಹೊಣೆ ಹೊತ್ತು ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ(ಕೆಎಸ್‌ಡಿಎಲ್) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಕೆಎಸ್ ಡಿಎಲ್ ಟೆಂಡರ್‌ಗೆ ಸಂಬಂಧಿಸಿದಂತೆ ₹40 ಲಕ್ಷ ಲಂಚ ಪಡೆಯುತ್ತಿದ್ದಾಗ ಗುರುವಾರ ಸಂಜೆ ಲೋಕಾಯುಕ್ತ ಪೊಲೀಸರು ಪ್ರಶಾಂತ್ ಮಾಡಾಳ್ ಅವರನ್ನು ಬಂಧಿಸಿದ್ದರು. ಅವರ ಖಾಸಗಿ ಕಚೇರಿಯಲ್ಲಿ ಇನ್ನೂ ₹ 1.62 ಕೋಟಿ ನಗದು ವಶಪಡಿಸಿಕೊಳ್ಳಲಾಗಿತ್ತು.

ಬಳಿಕ ಡಾಲರ್ಸ್ ಕಾಲೋನಿಯ ಪ್ರಶಾಂತ್ ಮನೆಯ ಮೇಲೆ ದಾಳಿಮಾಡಿದ್ದ ಲೋಕಾಯುಕ್ತ ಪೊಲೀಸರು ಶೋಧ ನಡೆಸಿದ್ದರು. ಮನೆಯಲ್ಲಿ ಸಂಗ್ರಹಿಸಿ ಇರಿಸಿದ್ದ ₹ 6 ಕೋಟಿ ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಲೋಕಾಯುಕ್ತದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಇವನ್ನೂ ಓದಿ..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT