ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 40 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಪುತ್ರ ಸೆರೆ

ಕೆಎಸ್‌ಡಿಎಲ್‌ ಟೆಂಡರ್‌ l ಕಾರ್ಯಾದೇಶ ನೀಡಲು ₹ 40 ಲಕ್ಷ ಲಂಚ
Last Updated 3 ಮಾರ್ಚ್ 2023, 3:00 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆಗೆ (ಕೆಎಸ್‌ಡಿಎಲ್‌) ರಾಸಾಯನಿಕ ಪೂರೈಸುವ ಗುತ್ತಿಗೆಯ ಕಾರ್ಯಾದೇಶ ನೀಡಲು ₹ 40 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ, ಪ್ರಶಾಂತ್‌ ಮಾಡಾಳ್‌ ಅವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಸಂಜೆ ಬಂಧಿಸಿದ್ದಾರೆ.

ಪ್ರಶಾಂತ್ ಅವರು ಕೆಎಸ್‌ಡಿಎಲ್‌ ಅಧ್ಯಕ್ಷರೂ ಆಗಿರುವ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರ ಮಗ. ವಿರೂಪಾಕ್ಷಪ್ಪ ಕೂಡ ಆರೋಪಿ ಎಂದು ಈ ಪ್ರಕರಣದ ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆ. ಅವ
ರನ್ನೂ ವಿಚಾರಣೆ ನಡೆಸಲು ಲೋಕಾಯುಕ್ತ ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:

ರಾಜ್ಯ ಲೆಕ್ಕಪತ್ರ ಇಲಾಖೆಯ ಜಂಟಿ ನಿಯಂತ್ರಕರಾಗಿರುವ ಪ್ರಶಾಂತ್‌, ಬೆಂಗಳೂರು ಜಲ ಮಂಡಳಿಯಲ್ಲಿ ಮುಖ್ಯ ಲೆಕ್ಕಾಧಿಕಾರಿ ಹುದ್ದೆಯಲ್ಲಿದ್ದಾರೆ. ತಂದೆ ಅಧ್ಯಕ್ಷರಾಗಿರುವ ಕೆಎಸ್‌ಡಿಎಲ್‌ ಟೆಂಡರ್‌ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಿ, ರಾಸಾಯನಿಕ ಸರಬರಾಜು ವೇಳಾಪಟ್ಟಿ ಮತ್ತು ಕಾರ್ಯಾದೇಶ ವಿತರಿಸಲು ₹ 81 ಲಕ್ಷ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು. ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿದ್ದರೂ ಗುತ್ತಿಗೆದಾರರಿಗೆ ಕಾರ್ಯಾದೇಶ ಮತ್ತು ಸರಬರಾಜು ವೇಳಾಪಟ್ಟಿ ನೀಡದಂತೆ ತಡೆಯೊಡ್ಡಿದ್ದರು. ಗುತ್ತಿಗೆದಾರ ಶ್ರೇಯಸ್‌ ಕಶ್ಯಪ್‌ ಲೋಕಾಯುಕ್ತ ಪೊಲೀಸ್‌ ವಿಭಾಗದ ಬೆಂಗಳೂರು ನಗರ ಘಟಕಕ್ಕೆ ದೂರು ನೀಡಿದ್ದರು.

ಕುಮಾರ ಪಾರ್ಕ್‌ನ ಕ್ರೆಸೆಂಟ್‌ ರಸ್ತೆಯಲ್ಲಿ ಪ್ರಶಾಂತ್‌ ಖಾಸಗಿ ಕಚೇರಿ
ಯೊಂದನ್ನು ಹೊಂದಿದ್ದಾರೆ. ಅಲ್ಲಿಗೆ ಲಂಚದ ಹಣ ತಲುಪಿಸುವಂತೆ ಸೂಚಿಸಿ
ದ್ದರು. ಗುರುವಾರ ಸಂಜೆ 6.45ಕ್ಕೆ ಖಾಸಗಿ ಕಚೇರಿಯಲ್ಲಿ ಆರೋಪಿಯನ್ನು ಭೇಟಿ ಮಾಡಿದ ಗುತ್ತಿಗೆದಾರ ₹ 40 ಲಕ್ಷ ತಲುಪಿಸಿದರು. ತಕ್ಷಣ ದಾಳಿಮಾಡಿದ ಲೋಕಾಯುಕ್ತ ಪೊಲೀಸರು ಪ್ರಶಾಂತ್‌ ಅವರನ್ನು ಬಂಧಿಸಿದರು.

ಲೋಕಾಯುಕ್ತದ ಬೆಂಗಳೂರು ನಗರ ಘಟಕದ ಎಸ್‌ಪಿ ಕೆ.ವಿ. ಅಶೋಕ್‌ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಐಜಿಪಿ ಡಾ.ಎ. ಸುಬ್ರಹ್ಮಣ್ಯೇಶ್ವರ ರಾವ್‌, ಪ್ರಶಾಂತ್‌ ಲಂಚಕ್ಕೆ ಬೇಡಿಕೆ ಇಟ್ಟಿರುವ ಕುರಿತು ಗುತ್ತಿಗೆದಾರರು ಗುರುವಾರ ಬೆಳಿಗ್ಗೆ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದನ್ನು ಆಧರಿಸಿ ಎಫ್‌ಐಆರ್‌ ದಾಖಲಿಸಿ, ಕಾರ್ಯಾ
ಚರಣೆ ನಡೆಸಲಾಗಿದೆ ಎಂದರು.

ನಗರದ ಡಾಲರ್ಸ್‌ ಕಾಲೋನಿಯಲ್ಲಿರುವ ಪ್ರಶಾಂತ್‌ ಮನೆ ಮೇಲೂ ದಾಳಿಮಾಡಿರುವ ಲೋಕಾಯುಕ್ತ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ವಶಕ್ಕೆ: ದುಡ್ಡು ಕೊಡಲು ಬಂದಿದ್ದಾರೆ ಎಂಬ ಅನುಮಾನದ ಮೇರೆಗೆ ಪ್ರಶಾಂತ್‌ ಅವರ ಖಾಸಗಿ ಕಚೇರಿಯಲ್ಲಿದ್ದ ಐವರನ್ನು ವಶಕ್ಕೆ ಪಡೆಯಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT