ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕ ಎಂ.ಪಿ. ಕುಮಾರಸ್ವಾಮಿ ತಪ್ಪಿತಸ್ಥ: ಹಣ ಪಾವತಿ ಇಲ್ಲವೇ ಜೈಲು ಶಿಕ್ಷೆ

Last Updated 13 ಫೆಬ್ರುವರಿ 2023, 19:10 IST
ಅಕ್ಷರ ಗಾತ್ರ

ಬೆಂಗಳೂರು: ಚೆಕ್‌ ಬೌನ್ಸ್‌ಗೆ ಸಂಬಂಧಿಸಿದ ಎಂಟು ಪ್ರತ್ಯೇಕ ಕ್ರಿಮಿನಲ್‌ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಒಟ್ಟು ₹ 1.36 ಕೋಟಿಗೂ ಹೆಚ್ಚಿನ ಮೊತ್ತವನ್ನು ಫಿರ್ಯಾದುದಾರರಿಗೆ ಪಾವತಿಸುವಂತೆ ಘೋಷಿಸಿದೆ. ತಪ್ಪಿದಲ್ಲಿ ಪ್ರತಿ ಪ್ರಕರಣದಲ್ಲಿ ತಲಾ ಆರು ತಿಂಗಳ ಸಾದಾ ಜೈಲು ಶಿಕ್ಷೆ ಅನುಭವಿಸುವಂತೆ ಆದೇಶಿಸಿದೆ.

ಈ ಕುರಿತ ಎಂಟು ಪ್ರತ್ಯೇಕ ಪ್ರಕರಣಗಳ ಮೇಲಿನ ಆದೇಶವನ್ನು ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ’ದ ನ್ಯಾಯಾಧೀಶೆ ಜೆ.ಪ್ರೀತ್‌ ಅವರು ಸೋಮವಾರ ಪ್ರಕಟಿಸಿದರು. ಕುಮಾರಸ್ವಾಮಿ ಅವರು ವಿವಿಧ ಪ್ರಕರಣಗಳಲ್ಲಿ ಒಟ್ಟು ₹ 1,38,65,000 ಮೊತ್ತಕ್ಕೆ ಮರುಪಾವತಿಯ ಚೆಕ್‌ ನೀಡಿದ್ದರು. ಇದರಲ್ಲಿ ₹ 1,36,50,000 ಬಾಕಿ ಉಳಿಸಿಕೊಂಡಿದ್ದರು. ಈ ಕುರಿತಂತೆ ಫಿರ್ಯಾದುಗಳು ಸಲ್ಲಿಕೆಯಾಗಿದ್ದವು. ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾ ಧೀಶರು ಈ ಆದೇಶ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT