ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾವುದೇ ಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸುತ್ತೇನೆ: ಮುರುಗೇಶ್‌ ನಿರಾಣಿ

Last Updated 13 ಜನವರಿ 2021, 5:41 IST
ಅಕ್ಷರ ಗಾತ್ರ

ಬೆಂಗಳೂರು: 'ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಂಪುಟದಲ್ಲಿ ಅವಕಾಶ ಮಾಡಿಕೊಟ್ಟಿದ್ದಾರೆ. ಯಾವುದೇ ಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸುತ್ತೇನೆ' ಎಂದು ನೂತನ ಸಚಿವರಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಲಿರುವ ಮುರುಗೇಶ್‌ ನಿರಾಣಿ ಸಂತಸ ವ್ಯಕ್ತಪಡಿಸಿದ್ದಾರೆ.

'ಈ ಹಿಂದೆ ಸಚಿವನಾಗಿ ಕೆಲಸ ಮಾಡಿರುವ ಅನುಭವವಿದೆ. ಹೀಗಾಗಿ ರಾಜ್ಯದ ಜನರ ಸೇವೆಗೆ ಸದಾ ಸಿದ್ಧ. ಕಳೆದ ಮೂರು ದಶಕಗಳಿಂದ ಬಿಜೆಪಿಯ ಕಾರ್ಯಕರ್ತನಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ' ಎಂದು ಅವರು ಹೇಳಿದ್ದಾರೆ.

ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ನಿರಾಣಿ, 'ಪಂಚಮಸಾಲಿ ಸಮುದಾಯದ ಸಮಸ್ಯೆಯನ್ನು ಮುಖ್ಯಮಂತ್ರಿ ಆಲಿಸಿದ್ದಾರೆ. ಪಾದಯಾತ್ರೆ ಕೈ ಬಿಡಲು ಬಸವಜಯ ಮೃತ್ಯುಂಜಯ ಶ್ರೀಗಳ ಬಳಿ ಮನವಿ ಮಾಡುತ್ತೇನೆ' ಎಂದರು.

ಪಂಚಮಸಾಲಿ ಸಮಾಜಕ್ಕೆ 2ಎ ಹಾಗೂ ಲಿಂಗಾಯತ ಸಮುದಾಯಕ್ಕೆ ಕೇಂದ್ರದ ಒಬಿಸಿ ಮೀಸಲಾತಿಗೆ ಒತ್ತಾಯಿಸಿ ಕೂಡಲಸಂಗಮದಿಂದ ಬೆಂಗಳೂರಿನವರೆಗೆ ಜ.14 ರಿಂದ ಪಾದಯಾತ್ರೆ ನಡೆಸಲು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಮಹಾಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನಿರ್ಧರಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT