ಮಂಗಳವಾರ, ಅಕ್ಟೋಬರ್ 27, 2020
28 °C

ಬಿಎಸ್‌ವೈ ಮನೆ ವಾಚ್‌ಮ್ಯಾನ್‌ ಆಗದ ಜಮೀರ್‌ ಇನ್ನು ಆಸ್ತಿ ಕೊಡುತ್ತಾರಾ: ರಾಮದಾಸ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ‘ಯಡಿಯೂರಪ್ಪ ಮುಖ್ಯಮಂತ್ರಿಯಾದರೆ ಅವರ ಮನೆಯ ವಾಚ್‌ಮ್ಯಾನ್‌ ಆಗುತ್ತೇನೆ ಎಂದು ಆಗಲಿಲ್ಲ. ಇನ್ನು ಆಸ್ತಿ ಬರೆದು ಕೊಡುತ್ತಾರಾ’ ಎಂದು ಬಿಜೆಪಿ ಶಾಸಕ ಎಸ್‌.ಎ.ರಾಮದಾಸ್ ಅವರು ಕಾಂಗ್ರೆಸ್‌ ಶಾಸಕ ಜಮೀರ್ ಅಹ್ಮದ್ ಅವರನ್ನು ಟೀಕಿಸಿದ್ದಾರೆ.‌

ಡ್ರಗ್ಸ್‌ ಮಾಫಿಯಾದಲ್ಲಿ ಯಾರೇ ಇದ್ದರೂ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಅನವಶ್ಯಕ ಹೇಳಿಕೆ ನೀಡಿ ನುಣುಚಿಕೊಳ್ಳುವ ಕೆಲಸ ಮಾಡಬಾರದು. ತನಿಖೆಗೆ ಆಗ್ರಹಿಸಬೇಕು. ಇದಕ್ಕೆ ವಿರೋಧ ಪಕ್ಷದ ಮುಖಂಡರೂ ಸಹಕರಿಸಬೇಕು ಎಂದರು.

ಡ್ರಗ್ಸ್‌ ಪ್ರಕರಣದಲ್ಲಿ ನಟಿ ಸಂಜನಾ ಜೊತೆ ಕೊಲಂಬೊಗೆ ಹೋಗಿದ್ದ ಆರೋಪ ಸಾಬೀತಾದರೆ ತಮ್ಮೆಲ್ಲ ಆಸ್ತಿಯನ್ನು ರಾಜ್ಯ ಸರ್ಕಾರಕ್ಕೆ ಬರೆದುಕೊಡುವುದಾಗಿ ಜಮೀರ್‌ ಹೇಳಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು