ಹೊನ್ನಾಳಿ: ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ಸಹೋದರ ಎಂ.ಪಿ. ರಮೇಶ್ ಅವರ ಹಿರಿಯ ಪುತ್ರ ಎಂ.ಆರ್. ಚಂದ್ರಶೇಖರ್ (25) ಕಾಣೆಯಾಗಿದ್ದಾರೆ.

ಭಾನುವಾರ ಸಂಜೆ 7.30ಕ್ಕೆ ಮನೆಯಿಂದ ಕಾರ್‌ನಲ್ಲಿ ತೆರಳಿರುವ ಚಂದ್ರಶೇಖರ್ ಇದುವರೆಗೂ ವಾಪಸ್ ಬಂದಿಲ್ಲ ಎಂದು ಅವರ ತಂದೆ ಹೊನ್ನಾಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ರೇಣುಕಾಚಾರ್ಯ ಸೇರಿದಂತೆ ಕುಟುಂಬ ಸದಸ್ಯರು ತೀವ್ರ ಹುಡುಕಾಟ ನಡೆಸಿದ್ದು, ಎರಡು ದಿನ ಕಳೆದರೂ ಸುಳಿವು ಸಿಕ್ಕಿಲ್ಲ. ಸ್ನೇಹಿತರು, ಬಂಧುಗಳನ್ನು ವಿಚಾರಿಸಿದರೂ ಪತ್ತೆಯಾಗಿಲ್ಲ.

‘ಎಸ್‌ಪಿ, ಡಿವೈಎಸ್‌ಪಿ ಮಾರ್ಗದಶರ್ನದಲ್ಲಿ ಮೂರು ತಂಡಗಳನ್ನು ರಚಿಸಿ ಹುಡುಕಾಟ ನಡೆಸುತ್ತಿದ್ದೇವೆ. ಲಭ್ಯವಿರುವ ಸಿ.ಸಿ.ಟಿವಿ ಕ್ಯಾಮೆರಾ ದೃಶ್ಯಾವಳಿಗಳು, ಟೋಲ್ ಗೇಟ್‌ಗಳಲ್ಲಿ ಪರಿಶೀಲನೆ ನಡಸಲಾಗುತ್ತಿದೆ’ ಎಂದು ಸಿಪಿಐ ಸಿದ್ದೇಗೌಡ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.