ಭಾನುವಾರ, ಜೂನ್ 20, 2021
23 °C

ಶಾಸಕ ಸೋಮನಗೌಡ ಪಾಟೀಲ ಸಾಸನೂರಿಗೆ ಕೋವಿಡ್-19 ದೃಢ             

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

MLA Somanagouda Patil

ವಿಜಯಪುರ: ಜಿಲ್ಲೆಯ ದೇವರಹಿಪ್ಪರಗಿ ಕ್ಷೇತ್ರದ ಶಾಸಕ ಸೋಮನಗೌಡ ಪಾಟೀಲ ಸಾಸನೂರ ಮತ್ತು ಯಾದಗಿರಿ ಮತ ಕ್ಷೇತ್ರದ ಶಾಸಕ ವೆಂಕಟ ರಡ್ಡಿ ಗೌಡ ಮುದ್ನಾಳ ಅವರಿಗೆ ಕೋವಿಡ್‌ ದೃಢಪಟ್ಟಿದೆ.

ಈ ಸಂಬಂಧ ತಮ್ಮ ಫೇಸ್‌ಬುಕ್‌ನಲ್ಲಿ  ಪೋಸ್ಟ್ ಹಾಕಿರುವ  ಶಾಸಕ ಸೋಮನಗೌಡ, ಆಗಸ್ಟ್ 14ರಂದು ಆರೋಗ್ಯ ತಪಾಸಣೆ ಹಾಗೂ ಕೊರೊನಾ ಟೆಸ್ಟ್ ಮಾಡಿಸಿದೆ. ಕೋವಿಡ್ ಪಾಸಿಟಿವ್ ದೃಢವಾಗಿದೆ. ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವೆ. ಆರೋಗ್ಯದಲ್ಲಿ ಯಾವುದೇ ತೊಂದರೆಯಿಲ್ಲ. ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದಿದ್ದಾರೆ.

ಬೇಗನೆ ಗುಣಮುಖನಾಗಿ ಕ್ಷೇತ್ರದ ಜನರ ಸೇವೆಗೆ ಮರಳುತ್ತೇನೆ. ನನ್ನ ಸಂಪರ್ಕಕ್ಕೆ ಬಂದವರು ಮುಂಜಾಗೃತಾ ಕ್ರಮವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಪರಸ್ಪರ ಅಂತರ ಕಾಪಾಡಿಕೊಂಡು ಮನೆಯಲ್ಲಿ ಇರಬೇಕು ಎಂದು ಮನವಿ ಮಾಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು