ಸೋಮವಾರ, ಅಕ್ಟೋಬರ್ 26, 2020
23 °C

ಆಗ್ನೇಯ ಪದವೀಧರ ಕ್ಷೇತ್ರ: ಬಿಜೆಪಿಯಲ್ಲಿ ಬಂಡಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

BJP

ಬೆಂಗಳೂರು: ವಿಧಾನಪರಿಷತ್ತಿನ ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಧಿಕೃತ ಅಭ್ಯರ್ಥಿ ಚಿದಾನಂದಗೌಡ ವಿರುದ್ಧ ಹಿರಿಯೂರು ಕ್ಷೇತ್ರದ ಬಿಜೆಪಿ ಶಾಸಕಿ ಪೂರ್ಣಿಮಾ ಅವರ ಪತಿ ಶ್ರೀನಿವಾಸ್ ಬಂಡಾಯ ಅಭ್ಯರ್ಥಿಯಾಗಿ ಬುಧವಾರ ನಾಮಪತ್ರ ಸಲ್ಲಿಸಿದರು.

ಇತ್ತೀಚೆಗಷ್ಟೇ ಪಕ್ಷ ಸೇರಿದ್ದ ಚಿದಾನಂದಗೌಡ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದ ಬಗ್ಗೆ ಪಕ್ಷದಲ್ಲಿ ಅಸಮಾಧಾನ ಎದ್ದಿದೆ.

ಶಿರಾ ಕ್ಷೇತ್ರದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಗೊಲ್ಲ ಸಮುದಾಯದ ಮತದಾರರು ಇರುವುದರಿಂದ ಅಲ್ಲಿ ತಮ್ಮ ಪತಿಗೆ ಟಿಕೆಟ್‌ ನೀಡು
ವಂತೆ ಶ್ರೀನಿವಾಸ್‌ ಅವರ ಪರವಾಗಿ ಪೂರ್ಣಿಮಾ ಅವರು ಪ್ರಯತ್ನ ನಡೆಸಿದ್ದರು. ಆದರೆ, ಅಲ್ಲಿ ರಾಜೇಶ್‌ಗೌಡ ಅವರಿಗೆ ಟಿಕೆಟ್‌ ನೀಡಲು ಪಕ್ಷ ನಿರ್ಧರಿಸಿದೆ. ಇದರಿಂದ ಶ್ರೀನಿವಾಸ್‌ ಅಸಮಾಧಾನಗೊಂಡಿದ್ದಾರೆ ಎಂದು ಮೂಲಗಳು ಹೇಳಿವೆ.

‘ಶ್ರೀನಿವಾಸ್‌ ಪಕ್ಷದ ಕಾರ್ಯಕರ್ತರಾಗಿದ್ದು. ಅವರ ಮನವೊಲಿಸುತ್ತೇವೆ’ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌ ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು