ವಿಶ್ವನಾಥ್ ಸಚಿವರಾಗುವುದು ಅಸಾಂವಿಧಾನಿಕ: ಹೈಕೋರ್ಟ್

ಬೆಳಗಾವಿ: ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು ಸಚಿವರಾಗುವುದು ಅಸಾಂವಿಧಾನಿಕ ಎಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಹೀಗಾಗಿ ವಿಶ್ವನಾಥ್ ಅವರ ಸಚಿವ ಸ್ಥಾನದ ಕನಸಿಗೆ ಅಡ್ಡಿಯಾಗಿದೆ.
ಅನರ್ಹ ಶಾಸಕರಾಗಿದ್ದ ಹಾಗೂ ಸದ್ಯ ವಿಧಾನ ಪರಿಷತ್ ಸದಸ್ಯರಾಗಿರುವ ಎಚ್ ವಿಶ್ವನಾಥ್, ಆರ್. ಶಂಕರ್ ಮತ್ತು ಎಂಟಿಬಿ ನಾಗರಾಜ್ ಅವರಿಗೆ ಸಚಿವ ಸ್ಥಾನ ನೀಡುವುದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ವಿಶ್ವನಾಥ್ ಅವರು ವಿಧಾನಪರಿಷತ್‌ಗೆ ನಾಮ ನಿರ್ದೇಶನಗೊಂಡು ಸದಸ್ಯರಾಗಿರುವುದರಿಂದ ಅವರು ಸಚಿವರಾಗಲು ಸಾಧ್ಯವಿಲ್ಲ. ಈ ವಿಚಾರವನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಪರಿಗಣಿಸಬೇಕು ಎಂದು ತಿಳಿಸಿದೆ.
ಹೈಕೋರ್ಟ್ ಆದೇಶದ ಬಳಿಕ ಈ ಬಗ್ಗೆ ಮಾತನಾಡಿರುವ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ‘ವಿಶ್ವನಾಥ್ ಜೊತೆಗೆ ನಾನಿರುತ್ತೇನೆ’ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.