ಆರ್ಯವೈಶ್ಯ ಅಭಿವೃದ್ಧಿ ನಿಗಮ: ಸಾಲ ಮರುಪಾವತಿಗೆ ಮೊಬೈಲ್ ಆ್ಯಪ್

ಬೆಂಗಳೂರು: ಸಾಲ ಮರುಪಾವತಿಯಲ್ಲಿ ಶೇ 90ರಷ್ಟು ಸಾಧನೆ ಮಾಡಿರುವ ರಾಜ್ಯ ಆರ್ಯವೈಶ್ಯ ಅಭಿವೃದ್ಧಿ ನಿಗಮವನ್ನು ಹಣಕಾಸು ನಿಗಮ ಆಗಿ ಪರಿವರ್ತಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ ನೀಡಿದರು.
ನಿಗಮದ ಸಾಲ ಮರುಪಾವತಿಯನ್ನು ಸುಗಮಗೊಳಿಸಲು ಅಭಿವೃದ್ಧಿಪಡಿಸಿದ ಮೊಬೈಲ್ ಆ್ಯಪ್‌ಗೆ ಗುರುವಾರ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ, ‘ಹಣಕಾಸು ನಿಗಮ ಆಗಿ ಪರಿವರ್ತಿಸಿದರೆ ಹೆಚ್ಚಿನ ಸಂಪನ್ಮೂಲ ಕ್ರೋಡೀಕರಿಸಲು ಸಾಧ್ಯವಾಗಲಿದೆ. ಜೊತೆಗೆ, ಹೆಚ್ಚಿನ ಸಂಖ್ಯೆಯಲ್ಲಿ ಬಡ ಫಲಾನುಭವಿಗಳಿಗೆ ನೆರವು ನೀಡಲು ಅನುಕೂಲ ಆಗಲಿದೆ’ ಎಂದು ಅಭಿಪ್ರಾಯಪಟ್ಟರು.
ಪ್ರಾಸ್ತಾವಿಕವಾಗಿ ಮಾತನಾಡಿದ ನಿಗಮದ ಅಧ್ಯಕ್ಷ ಡಿ.ಎಸ್. ಅರುಣ್, ‘ನಿಗಮದ ಫಲಾನುಭವಿಗಳು ಸಾಲ ಮರುಪಾವತಿಗಾಗಿ ದೂರದ ಊರುಗಳಿಂದ ಜಿಲ್ಲಾ ಕೇಂದ್ರಕ್ಕೆ ಬರುತ್ತಿದ್ದಾರೆ. ಅದರ ಬದಲು, ಡಿಜಿಟಲ್ ಪಾವತಿ ವ್ಯವಸ್ಥೆಯ ಮೂಲಕ ಸಾಲ ಮರುಪಾವತಿಗೆ ಅವಕಾಶ ಕಲ್ಪಿಸಲು ಈ ಆ್ಯಪ್ ಅಭಿವೃದ್ಧಿಪಡಿಸಲಾಗಿದೆ’ ಎಂದರು.
ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ನಿಗಮದ ವ್ಯವಸ್ಥಾಪಕ ನಿರ್ದೇಶಕಿ ದೀಪಶ್ರೀ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.