ಗುರುವಾರ , ಮಾರ್ಚ್ 30, 2023
24 °C

ಬೀದರ್‌ ಸಂಸದ ಭಗವಂತ ಖೂಬಾ ಕೇಂದ್ರ ಸಂಪುಟಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani Photo

ನವದೆಹಲಿ: ಬೀದರ್ ಸಂಸದ ಭಗವಂತ ಖೂಬಾ ಅವರಿಗೆ ಪ್ರಧಾನಿ ಕಚೇರಿಯಿಂದ ಬುಧವಾರ ಮಧ್ಯಾಹ್ನ ಕರೆ‌ ಬಂದಿದ್ದು, ಕೇಂದ್ರ ಸಂಪುಟ ಸೇರ್ಪಡೆ ಖಾತರಿಯಾಗಿದೆ.

ಕ್ಷೇತ್ರದಲ್ಲಿದ್ದ ಖೂಬಾ ಅವರು ಕರೆ ಬಂದ ಹಿನ್ನೆಲೆಯಲ್ಲಿ, ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆಯುವ‌ ಸಮಾರಂಭದಲ್ಲಿ ಭಾಗವಹಿಸಿ ಪ್ರಮಾಣ ವಚನ ಸ್ವೀಕರಿಸಲು ದೆಹಲಿಯತ್ತ ಹೊರಟಿದ್ದಾರೆ. ಹೈದರಾಬಾದ್ ನಿಂದ ವಿಮಾನದ ಮೂಲಕ ಅವರು ದೆಹಲಿಗೆ‌ ಬರಲಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.

ಹಾಲಿ ಸಚಿವರ ಪೈಕಿ ಕೆಲವೊಬ್ಬರನ್ನು ಸಂಪುಟದಿಂದ ಕೈಬಿಡುವ ಸಾಧ್ಯತೆ ಇದೆ. ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ ರಾಜೀನಾಮೆ ನೀಡಿದ್ದಾರೆ. 

ಶಿಕ್ಷಣ ಸಚಿವ ರಮೇಶ್‌ ಪೋಖ್ರಿಯಾಲ್‌ ನಿಶಾಂಕ್, ಕಾರ್ಮಿಕ ಸಚಿವ ಸಂತೋಷ್‌ ಗಂಗ್ವಾರ್‌ ಈಗಾಗಲೇ ರಾಜೀನಾಮೆ ನೀಡಿದ್ದಾರೆ ಎಂದು ‘ಎಎನ್‌ಐ’ ಸುದ್ದಿ ಸಂಸ್ಥೆ ಟ್ವೀಟ್ ಮಾಡಿದೆ. ಕೇಂದ್ರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆಯ ರಾಜ್ಯ ಸಚಿವರಾದ ದೇಬಶ್ರೀ ಚೌಧುರಿ ಸಹ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು