ಚುನಾವಣೆಗಾಗಿ ಬಿಜೆಪಿಯಿಂದ ಅಲ್ಪಸಂಖ್ಯಾತರ ಓಲೈಕೆ: ಡಿ.ಕೆ. ಶಿವಕುಮಾರ್

ಹುಬ್ಬಳ್ಳಿ: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ, ಬಿಜೆಪಿಯವರಿಗೆ ಅಲ್ಪಸಂಖ್ಯಾತರ ಮೇಲೆ ಪ್ರೀತಿ ಬಂದಿದ್ದು, ಇದೀಗ ಸಮುದಾಯದ ಓಲೈಕೆಗೆ ಮುಂದಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.
ನಗರದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರಿಗೂ ಅಲ್ಪಸಂಖ್ಯಾತರ ಮೇಲೆ ಈಗ ಪ್ರೀತಿ ಬಂದಿದೆ. ಬಿಜೆಪಿಯವರಿಗೆ ಎಷ್ಟು ಕಾಳಜಿ ಇದೆ ಎಂಬುದು ನಮಗೆ ಗೊತ್ತು. ರಾಜ್ಯಕ್ಕೆ ಬಂದಿರುವ ಮೋದಿ ಅವರು, ಸರ್ಕಾರದ ವ್ಯಾಪಕ ಭ್ರಷ್ಟಾಚಾರಕ್ಕೆ ಉತ್ತರಿಸಬೇಕು ಎಂದರು.
ಇದು ಭರವಸೆಗಳ ಹಾಗೂ ಬಿ ರಿಪೋರ್ಟ್ ಸರ್ಕಾರ. ರಾಜ್ಯದಲ್ಲಿ ನಡೆದಿರುವ ಸಾಕಷ್ಟು ಭ್ರಷ್ಟಾಚಾರ ಹಾಗೂ ಹಗರಣಗಳ ಬಗ್ಗೆ ಇನ್ನೂ ಉತ್ತರ ಸಿಕ್ಕಿಲ್ಲ. ಪಿಎಸ್‌ಐ ನೇಮಕಾತಿ, ಲೋಕೋಪಯೋಗಿ ಇಲಾಖೆಯ ಪ್ರತಿಯೊಂದು ಕಾಮಗಾರಿಯಲ್ಲಿ ಕಮಿಷನ್, ಇದನ್ನು ಪ್ರಶ್ನೆ ಮಾಡಿದ ಕೆಂಪಣ್ಣ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ಈ ಎಲ್ಲ ಪ್ರಶ್ನೆಗಳಿಗೆ ಮೋದಿಯವರು ಉತ್ತರ ಕೊಡಲಿ ಎಂದು ಸವಾಲು ಹಾಕಿದರು.
ಚುನಾವಣೆ ಹಿನ್ನೆಲೆಯಲ್ಲಿ ಮೋದಿ ಅವರು ರಾಜ್ಯಕ್ಕೆ ಪದೇಪದೇ ಬರ್ತಿದ್ದಾರೆ. ರಾಜ್ಯದಲ್ಲಿ ಸಾಕಷ್ಟು ಸಮಸ್ಯೆಗಳು ತಾಂಡವಾಡುತ್ತಿವೆ. ರೈತರಿಗೆ ಹಣ ಏಕೆ ಡಬಲ್ ಆಗಲಿಲ್ಲ, ಗ್ಯಾಸ್ ಬೆಲೆ ಇಳಿಕೆ ಆಗಿಲ್ಲ ಎಂದು ಪ್ರಶ್ನಿಸಿದರು
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.