ಹುಬ್ಬಳ್ಳಿ: ಧಾರವಾಡದ ಚಿಕ್ಕಮಲ್ಲಿಗವಾಡದಲ್ಲಿರುವ ರಾಜ್ಯದ ಮೊದಲ ಐಐಟಿ (ಭಾರತೀಯ ತಂತ್ರಜ್ಞಾನ ಸಂಸ್ಥೆ) ಉದ್ಘಾಟನೆ ಸಲುವಾಗಿ, ಭಾನುವಾರ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ವಾಗತಿಸಿದರು.
ವಿಶೇಷ ವಿಮಾನದಲ್ಲಿ ಮಧ್ಯಾಹ್ನ ನಿಲ್ದಾಣಕ್ಕೆ ಬಂದಿಳಿದ ಮೋದಿ ಅವರನ್ನು ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಹುಬ್ಬಳ್ಳಿ–ಧಾರವಾಡ ಮಹಾನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜಯ ಕಪಟಕರ ಹಾಗೂ ಹು–ಧಾ ಪೊಲೀಸ್ ಕಮಿಷನರ್ ರಮನ್ ಗುಪ್ತಾ ಇದ್ದರು.
ನಂತರ ಸೇನಾ ಹೆಲಿಕಾಪ್ಟರ್‌ನಲ್ಲಿ ಮುಖ್ಯಮಂತ್ರಿಯೊಂದಿಗೆ ಚಿಕ್ಕಮಲ್ಲಿಗವಾಡಕ್ಕೆ ತೆರಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.