ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೊಹಮ್ಮದ್ ನಲಪಾಡ್‌ ಯುವ ಕಾಂಗ್ರೆಸ್‌ ಸಮಿತಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ

Last Updated 31 ಜನವರಿ 2022, 17:55 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್‌ ಸಮಿತಿ ಅಧ್ಯಕ್ಷರಾಗಿ ಮೊಹಮ್ಮದ್ ನಲಪಾಡ್‌ ಸೋಮವಾರ ಅಧಿಕಾರ ಸ್ವೀಕರಿಸಿದರು.

ಯುವ ಕಾಂಗ್ರೆಸ್‌ ಸಮಿತಿ ಚುನಾವಣೆಯಲ್ಲಿ ನಲಪಾಡ್‌ ಗೆಲುವು ಸಾಧಿಸಿದ್ದರು. ಆದರೆ, ಅವರನ್ನು ಅನರ್ಹಗೊಳಿಸಿ ಎರಡನೇ ಸ್ಥಾನದಲ್ಲಿದ್ದ ರಕ್ಷಾ ರಾಮಯ್ಯ ಅವರಿಗೆ ಯುವ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಸ್ಥಾನ ನೀಡಲಾಗಿತ್ತು. ನಂತರ ಇಬ್ಬರ ನಡುವೆ ಸಂಧಾನ ನಡೆಸಿ, ಅಧಿಕಾರದ ಅವಧಿ ಹಂಚಿಕೆ ಮಾಡಲಾಗಿತ್ತು. ರಕ್ಷಾ ರಾಮಯ್ಯ ಅವಧಿ ಅಂತ್ಯಗೊಂಡಿದ್ದು, ನಲಪಾಡ್‌ ಯುವ ಕಾಂಗ್ರೆಸ್‌ ಸಮಿತಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದರು.

ಮೊಹಮ್ಮದ್ ನಲಪಾಡ್‌ ಅವರ ಪದಗ್ರಹಣ ಸಮಾರಂಭ ಇದೇ 10ರಂದು ನಡೆಯಲಿದೆ. ಆದರೆ, ಸೋಮವಾರದಿಂದಲೇ ಅಧಿಕಾರ ಸ್ವೀಕರಿಸುವಂತೆ ಕಾಂಗ್ರೆಸ್‌ ವರಿಷ್ಠರು ನಿರ್ದೇಶನ ನೀಡಿದ್ದರು. ಹೀಗಾಗಿ, ಯುವ ಕಾಂಗ್ರೆಸ್‌ ಸಮಿತಿ ಅಧ್ಯಕ್ಷರ ಕಚೇರಿಯಲ್ಲಿ ಪೂಜೆ ಸಲ್ಲಿಸಿದ್ದಾರೆ. ಅಲ್ಲಿ ಸರ್ವಧರ್ಮ ಪ್ರಾರ್ಥನೆ ನಡೆಸುವ ಮೂಲಕ ಕಚೇರಿ ಪ್ರವೇಶಿಸಿದರು.

ಮೊಹಮ್ಮದ್‌ ನಲಪಾಡ್‌ ಅವರ ತಂದೆ, ಶಾಸಕ ಎನ್‌.ಎ. ಹ್ಯಾರಿಸ್‌, ಅವರ ತಂದೆ ಎನ್‌.ಎ. ಮೊಹಮ್ಮದ್ ಮತ್ತು ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಜಬ್ಬಾರ್‌ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT