ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೇಜಾವರ ಶ್ರೀ– ಮೋಹನ್‌ ಭಾಗವತ್‌ ಭೇಟಿ

Last Updated 11 ಜನವರಿ 2021, 18:58 IST
ಅಕ್ಷರ ಗಾತ್ರ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ(ಆರ್‌ಎಸ್‌ಎಸ್‌) ಸರಸಂಘಚಾಲಕ ಮೋಹನ್‌ ಭಾಗವತ್‌ ಅವರು ಸೋಮವಾರ ಬೆಳಿಗ್ಗೆ ಪೇಜಾವರ ಮಠದ ವಿಶ್ವಪ್ರಸನ್ನ ಸ್ವಾಮೀಜಿ ಅವರನ್ನು ಭೇಟಿಯಾಗಿ ಕೆಲಕಾಲ ಮಾತುಕತೆ ನಡೆಸಿದರು.

ನಗರಕ್ಕೆ ಬಂದಿದ್ದ ಭಾಗವತ್‌ ಅವರು ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿದ್ದ ಪೇಜಾವರ ಸ್ವಾಮೀಜಿಯವರನ್ನು ಭೇಟಿಮಾಡಿದರು. ಈ ಸಂದರ್ಭದಲ್ಲಿ ಸ್ವಾಮೀಜಿ ಭಾಗವತ್‌ ಅವರಿಗೆ ಸ್ಮರಣಿಕೆ ನೀಡಿ ಗೌರವಿಸಿದರು.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸಿದ್ಧತೆ, ಧನಸಂಗ್ರಹ ಕುರಿತು ಇಬ್ಬರೂ ಚರ್ಚೆ ನಡೆಸಿದ್ದಾರೆ. ಹೈದರಾಬಾದ್‌ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಇತ್ತೀಚೆಗೆ ದೇವಸ್ಥಾನಗಳ ಮೇಲೆ ನಡೆದಿರುವ ದಾಳಿಯ ಕುರಿತೂ ಇಬ್ಬರೂ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT