ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಣ ಅಕ್ರಮ ವರ್ಗಾವಣೆ ಪ್ರಕರಣ: ಇ.ಡಿ ವಿಚಾರಣೆಗೆ ಹಾಜರಾದ ಶಿವಕುಮಾರ್‌

Last Updated 17 ಆಗಸ್ಟ್ 2022, 21:42 IST
ಅಕ್ಷರ ಗಾತ್ರ

ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದ ಪ್ರಮುಖ ಆರೋಪಿಯಾಗಿರುವಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ಇತರ ನಾಲ್ವರು ಆರೋಪಿಗಳುಇಲ್ಲಿನ ಚುನಾಯಿತ ಪ್ರತಿನಿಧಿಗಳ ಪ್ರಕರಣಗಳ ವಿಶೇಷ ನ್ಯಾಯಾಲಯದಲ್ಲಿ (ಇ.ಡಿ. ನ್ಯಾಯಾಲಯ) ಬುಧವಾರ ವಿಚಾರಣೆಗೆ ಹಾಜರಾದರು.

ವಿಚಾರಣೆ ಆರಂಭವಾಗುತ್ತಿದ್ದಂತೆ ಆರೋಪಿಗಳು, ಆರೋಪಪಟ್ಟಿಯ ಜತೆಗೆ ಇ.ಡಿ. ಅಧಿಕಾರಿಗಳು ನ್ಯಾಯಾಲಯಕ್ಕೆ ಸಲ್ಲಿಸಿರುವ ಎಲ್ಲ ದಾಖಲೆಗಳನ್ನು ನೀಡುವಂತೆ ಮನವಿ ಮಾಡಿದರು. ಇ.ಡಿ. ಪರ ವಕೀಲರು, ‘ಈ ದಾಖಲೆಗಳನ್ನು ಕೂಡಲೇ ಸಲ್ಲಿಸಲು ಆಗುವುದಿಲ್ಲ. ನಾಲ್ಕೈದು ವಾರಗಳ ಕಾಲಾವಕಾಶ ಬೇಕು’ ಎಂದರು. ಅವರ ವಾದವನ್ನು ಸಮ್ಮತಿಸಿದ ನ್ಯಾಯಾಲಯವು ವಿಚಾರಣೆಯನ್ನು ಸೆಪ್ಟೆಂಬರ್‌ 27ಕ್ಕೆ ಮುಂದೂಡಿತು.

ಶಿವಕುಮಾರ್‌, ಅವರ ನಿಕಟವರ್ತಿಗಳಾದ ಉದ್ಯಮಿ ಸಚಿನ್‌ ನಾರಾಯಣ್‌, ಶರ್ಮಾ ಟ್ರಾನ್ಸ್‌ಪೋರ್ಟ್‌ ಮಾಲೀಕ ಸುನೀಲ್‌ ಕುಮಾರ್‌ ಶರ್ಮಾ, ದೆಹಲಿಯ ಆಂಜನೇಯ ಹನುಮಂತಯ್ಯ ಮತ್ತು ರಾಜೇಂದ್ರ ಎನ್‌. ವಿರುದ್ಧ ವಿಚಾರಣೆ ಆರಂಭಿಸುವಂತೆ ಕೋರಿ ನ್ಯಾಯಾಲಯಕ್ಕೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆರೋಪ ಪಟ್ಟಿ ಸಲ್ಲಿಸಿದ್ದರು.

ಈ ವರದಿಯನ್ನು ಮಾನ್ಯ ಮಾಡಿದ ನ್ಯಾಯಾಲಯವು ವಿಚಾರಣೆಗೆ ಹಾಜರಾಗುವಂತೆ ಎಲ್ಲ ಆರೋಪಿಗಳಿಗೂ ಸಮನ್ಸ್‌ ಜಾರಿ ಮಾಡಿತ್ತು.ಐವರು ಆರೋಪಿಗಳಿಗೆ ನ್ಯಾಯಾಲಯವು ಆಗಸ್ಟ್‌ 2ರಂದು ಜಾಮೀನು ನೀಡಿತ್ತು.

2017ರಲ್ಲಿ ಶಿವಕುಮಾರ್‌ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ಮಾಡಿದ್ದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶೋಧ ನಡೆಸಿದ್ದರು. ಆಗ, ದೆಹಲಿಯ ವಿವಿಧ ಸ್ಥಳಗಳಲ್ಲಿ ₹ 8.59 ಕೋಟಿ ನಗದು ವಶಕ್ಕೆ ಪಡೆಯಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT