ಬೆಂಗಳೂರು: ‘ಮಂಕಿಪಾಕ್ಸ್ (ಮಂಗನ ಸಿಡುಬು) ರೋಗದ ಬಗ್ಗೆ ರಾಜ್ಯದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ವಿಮಾನ ಮತ್ತು ರೈಲು ನಿಲ್ದಾಣಗಳಲ್ಲಿ ತಪಾಸಣೆ ನಡೆಸಲಾಗುತ್ತಿದೆ’ ಎಂದು ಡಾ.ಕೆ. ಸುಧಾಕರ್ ತಿಳಿಸಿದರು.
ನೆರೆಯ ಕೇರಳದಲ್ಲಿ ಪ್ರಕರಣಗಳು ವರದಿಯಾಗಿರುವುದರಿಂದ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು, ‘ಮಂಕಿಪಾಕ್ಸ್ ಬಗ್ಗೆ ಆರು ತಿಂಗಳ ಹಿಂದೆಯೇ ತಜ್ಞರು ಮತ್ತು ಅಧಿಕಾರಿಗಳ ಜತೆಗೆ ಸಮಾಲೋಚಿಸಿ, ಮುನ್ನೆಚ್ಚರಿಕೆಮಾರ್ಗಸೂಚಿ ಹೊರಡಿಸಲಾಗಿತ್ತು. ಕೇರಳದಲ್ಲಿ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿದೆ. ಗಡಿ ಮತ್ತು ಇತರೆ ಭಾಗಗಳಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಈಗಾಗಲೇ ಇಲಾಖೆ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗಿದೆ. ಆದ್ದರಿಂದ ಈ ರೋಗದ ಬಗ್ಗೆ ಜನರು ಆತಂಕಪಡುವ ಅಗತ್ಯವಿಲ್ಲ’ ಎಂದು ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.