ವಿವಿಧೆಡೆ ಗುಡುಗು ಸಹಿತ, ಬಿರುಸಿನ ಮಳೆ

ಕಲಬುರ್ಗಿ/ಹುಬ್ಬಳ್ಳಿ/ಮೈಸೂರು: ಕಲ್ಯಾಣ ಕರ್ನಾಟಕದ ಕಲಬುರ್ಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳ ಹಲವೆಡೆ ಮಂಗಳವಾರ ಬಿರುಸಿನ ಮಳೆ ಸುರಿಯಿತು. ಕಲಬುರ್ಗಿ ನಗರದಲ್ಲಿ ಗುಡುಗು, ಸಿಡಿಲಿನ ಆರ್ಭಟ ಜೋರಾಗಿತ್ತು.
ಬೀದರ್ ತಾಲ್ಲೂಕಿನಲ್ಲಿ ಒಂದು ಗಂಟೆ ಧಾರಾಕಾರ, ಹುಲಸೂರಿನಲ್ಲಿ ಸಾಧಾರಣ ಮಳೆಯಾಗಿದೆ. ಯಾದಗಿರಿ ತಾಲ್ಲೂಕಿನ ಸೈದಾಪುರ ಗ್ರಾಮ, ವಡಗೇರಾ ತಾಲ್ಲೂಕಿನಲ್ಲಿ ಧಾರಾಕಾರ ಮಳೆಯಾಯಿತು.
ಮೈಸೂರು ನಗರ ಹಾಗೂ ಜಿಲ್ಲೆಯ ನಂಜನಗೂಡು ಹಾಗೂ ತಿ.ನರಸೀಪುರ ತಾಲ್ಲೂಕುಗಳಲ್ಲಿ ಸೋಮವಾರ ತಡರಾತ್ರಿ ಗುಡುಗು, ಸಿಡಿಲು ಸಮೇತ ಧಾರಾಕಾರ ಮಳೆಯಾಗಿದೆ. ರಾತ್ರಿ 12.30ರಿಂದ ನಸುಕಿನವರೆಗೂ ಸುರಿಯಿತು.
ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಗಳ ವಿವಿಧೆಡೆ ಮಂಗಳವಾರ ಗುಡುಗು ಸಹಿತ ಮಳೆಯಾಗಿದೆ. ಬಾಗಲಕೋಟೆ ಜಿಲ್ಲೆಯ ಕುಳಗೇರಿ ಹೋಬಳಿಯ ಸುತ್ತಮುತ್ತ ಭಾರಿ ಮಳೆಗೆ ಕೃಷಿ ಭೂಮಿಯಲ್ಲಿನ ಒಡ್ಡುಗಳು ಕಿತ್ತುಹೋಗಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.