ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ: ದ.ಕ, ಉಡುಪಿ, ಚಿಕ್ಕಮಗಳೂರಲ್ಲೂ ವರ್ಷಧಾರೆ

Last Updated 3 ಜುಲೈ 2022, 18:26 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಕೊಡಗು ಜಿಲ್ಲೆ ಹಾಗೂ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಶನಿವಾರ ರಾತ್ರಿಯಿಡೀ ಧಾರಾಕಾರ ಮಳೆ ಸುರಿದಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾನುವಾರ ಬಿರುಸಿನ ಮಳೆಯಾಗಿದ್ದರೆ, ಮೈಸೂರು ಜಿಲ್ಲೆಯಲ್ಲಿ ಜಿಟಿಜಿಟಿ ಮಳೆಯಾಗಿದೆ.

ಕೊಡಗು ಜಿಲ್ಲೆಯ ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿಯಾಗಿದೆ. ರಸ್ತೆಮೇಲೆ ನೀರು ಹರಿಯುತ್ತಿದ್ದು, ನಾಪೋಕ್ಲು–ಭಾಗಮಂಡಲ ಸಂಪರ್ಕ ಕಡಿತಗೊಂಡಿದೆ. ಭಾಗಮಂಡಲ–ತ್ರಿವೇಣಿ ಸಂಗಮ ರಸ್ತೆಯೂ ಜಲಾವೃತಗೊಂಡಿದೆ. ಹಾರಂಗಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಮತ್ತಷ್ಟು ಏರಿಕೆಯಾಗಿದ್ದು, 15 ಸಾವಿರ ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿದ ಭಾರಿ ಮಳೆ ಪರಿಣಾಮ ಕೆಆರ್‌ಎಸ್ ಒಳ ಹರಿವಿನಲ್ಲಿ ಹೆಚ್ಚಳವಾಗಿದೆ. ಜಲಾಶಯಕ್ಕೆ 13,418 ಕ್ಯುಸೆಕ್ ಒಳಹರಿವುಇದ್ದು, ಸದ್ಯ 109.52 ಅಡಿ ತಲುಪಿದೆ. ಹೊರ ಹರಿವು 1,208 ಕ್ಯುಸೆಕ್‌ ಇದೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಆಲೆಟ್ಟಿಯಲ್ಲಿ 12.55 ಸೆಂ.ಮೀ, ಹರಿಹರ ಪಲ್ಲತಡ್ಕ ಹಾಗೂ ಸಂಪಾಜೆಯಲ್ಲಿ 12.45 ಸೆಂ.ಮೀ. ಮಳೆಯಾಗಿದೆ. ಕರಾವಳಿಯುದ್ದಕ್ಕೂ ಕಡಲು ಪ್ರಕ್ಷುಬ್ಧಗೊಂಡಿದೆ. ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಉತ್ತಮ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT