ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದ ಹಲವೆಡೆ ಮುಂದುವರಿದ ಭಾರಿ ಮಳೆ

Last Updated 5 ಜುಲೈ 2022, 18:32 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಕೊಡಗು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಂಗಳವಾರ ಎಡೆಬಿಡದೆ ಮಳೆ ಸುರಿದಿದೆ. ಧಾರವಾಡ, ಬೆಳಗಾವಿ, ವಿಜಯನಗರ, ಬಾಗಲಕೋಟೆ, ಗದಗ, ಹಾವೇರಿ ಜಿಲ್ಲೆಗಳಲ್ಲಿಯೂ ಉತ್ತಮ ಮಳೆಯಾಗಿದೆ. ಕೆಲವೆಡೆ ಕೃಷಿ ಚಟುವಟಿಕೆಗಳು ಗರಿಗೆದರಿವೆ.

ಕೊಡಗು ಜಿಲ್ಲೆಯಲ್ಲಿ ಬುಧವಾರವೂ ಭಾರಿ ಮಳೆಯಾಗುವ ಮುನ್ನೆಚ್ಚರಿಕೆಯನ್ನು ನೀಡಲಾಗಿದೆ. ಕೊಡಗು, ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ಬುಧವಾರ ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು, ಮೂಡಿಗೆರೆ, ಕೊಪ್ಪ, ಶೃಂಗೇರಿ, ಕಳಸ ಹಾಗೂ ಎನ್‌.ಆರ್‌.ಪುರ ತಾಲ್ಲೂಕುಗಳ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಇದೇ 9ರ ವರೆಗೆ ರಜೆ ಘೋಷಿಸಲಾಗಿದೆ. ಜುಲೈ 7ರವರೆಗೆ ರಾಜ್ಯದ ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ‘ಆರೆಂಜ್ ಅಲರ್ಟ್’ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸಮುದ್ರ ಮತ್ತಷ್ಟು ಪ್ರಕ್ಷುಬ್ಧಗೊಂಡಿದೆ. ಕಾರವಾರ, ಮಾಜಾಳಿ, ಗೋಕರ್ಣ, ಕುಮಟಾ, ಹೊನ್ನಾವರ ಭಾಗದಲ್ಲಿ ಭಾರಿ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ನೇತ್ರಾವತಿ ನದಿಯ ನೀರಿನ ಮಟ್ಟ ಹೆಚ್ಚುತ್ತಿರುವುದರಿಂದ ನದಿಪಾತ್ರದ ಗ್ರಾಮಸ್ಥರು ಆತಂಕದಲ್ಲಿದ್ದಾರೆ. ಕಲ್ಲಡ್ಕ-ಕಾಞಂಗಾಡ್ ಅಂತರರಾಜ್ಯ ಹೆದ್ದಾರಿಯ ಸಾರಡ್ಕ ಚೆಕ್‌ಪೋಸ್ಟ್‌ ಬಳಿ ಗುಡ್ಡ ಕುಸಿತದಿಂದ ಕರ್ನಾಟಕ- ಕೇರಳ ನಡುವಿನ ಸಂಚಾರ ಮೊಟಕುಗೊಂಡಿತ್ತು.

ಕೊಡಗು ಜಿಲ್ಲೆಯಾದ್ಯಂತ ಸೋಮವಾರ ರಾತ್ರಿ ಹಾಗೂ ಮಂಗಳವಾರ ದಿನವಿಡೀ ಭಾರಿ ಗಾಳಿಯೊಂದಿಗೆ ಮಳೆಯಾಗಿದೆ. ತಲಕಾವೇರಿ– ಭಾಗಮಂಡಲ ರಸ್ತೆಯಲ್ಲಿ ಬಂಡೆಯೊಂದು ರಸ್ತೆಗೆ ಉರುಳಿ ಬಿದ್ದಿದೆ. ಮಡಿಕೇರಿ- ಮಂಗಳೂರು ರಸ್ತೆಯಲ್ಲಿ ಮೊಣ್ಣಂಗೇರಿ ಸಮೀಪ ಕುಸಿದ ಮಣ್ಣನ್ನು ತೆರವುಗೊಳಿಸಲಾಗಿದೆ. ಹಾರಂಗಿ ಜಲಾಶಯದಿಂದ 12,866 ಕ್ಯುಸೆಕ್‌ನಷ್ಟು ನೀರನ್ನು ನದಿಗೆ
ಬಿಡಲಾಗುತ್ತಿದೆ. ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ ಜಿಲ್ಲೆಗಳಲ್ಲೂ ಮಳೆಯಾಗಿದೆ. ಗಾಜನೂರಿನ ತುಂಗಾ ಜಲಾಶಯ ಭರ್ತಿಯಾಗಿದ್ದು, 44 ಸಾವಿರ ಕ್ಯುಸೆಕ್‌ ನಷ್ಟು ನೀರನ್ನು ನದಿಗೆ ಬಿಡಲಾಗಿದೆ. ಮಲೆನಾಡು, ಹಾಸನ ಜಿಲ್ಲೆಯಲ್ಲೂ ಉತ್ತಮ ಮಳೆಯಾಗಿದೆ.

ಕಲ್ಯಾಣ ಕರ್ನಾಟಕದ ಕಲಬುರಗಿ, ಯಾದಗಿರಿ ಬೀದರ್, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಯ ವಿವಿಧೆಡೆ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT