ಶುಕ್ರವಾರ, ಅಕ್ಟೋಬರ್ 23, 2020
21 °C

ವಿಧಾನಮಂಡಲ ಅಧಿವೇಶನ: ಸಾರ್ವಜನಿಕರ ಪ್ರವೇಶ ನಿಷೇಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸೋಮವಾರದಿಂದ ವಿಧಾನಮಂಡಲ ಅಧಿವೇಶನ ಆರಂಭವಾಗುತ್ತಿರುವುದರಿಂದ ವಿಧಾನಸೌಧ ಮತ್ತು ವಿಕಾಸಸೌಧ ಕಟ್ಟಡಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. ಸಚಿವರು, ಶಾಸಕರು, ಅಧಿಕಾರಿಗಳು, ಸಿಬ್ಬಂದಿ ಮತ್ತು ಮಾಧ್ಯಮದವರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ.

ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ಸಚಿವರು ಮತ್ತು ಶಾಸಕರು ಒಬ್ಬ ಆಪ್ತ ಸಹಾಯಕರೊಂದಿಗೆ ಪ್ರವೇಶಿಸಬಹುದು. ಇಲಾಖಾ ಮುಖ್ಯಸ್ಥರು, ಕಾರ್ಯದರ್ಶಿ ಮತ್ತು ಅದಕ್ಕಿಂತ ಮೇಲಿನ ಹಂತದ ಅಧಿಕಾರಿಗಳಿಗೆ ಮಾತ್ರ ಈ ದ್ವಾರದಲ್ಲಿ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ.

ಸಚಿವರು ಮತ್ತು ಶಾಸಕರ ಆಪ್ತ ಸಹಾಯಕರು ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಕುಳಿತುಕೊಳ್ಳಬೇಕು. ಅಂಗರಕ್ಷಕ ಸಿಬ್ಬಂದಿ ವಿಕಾಸಸೌಧದ ಮೊದಲನೇ ಮಹಡಿಯಲ್ಲಿರುವ ಸಮಿತಿ ಕೊಠಡಿ ಮತ್ತು ನಾಲ್ಕನೇ ಮಹಡಿಯಲ್ಲಿರುವ ಸಮ್ಮೇಳನ ಕೊಠಡಿಯಲ್ಲಿ ಕುಳಿತುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸುತ್ತೋಲೆ ಹೊರಡಿಸಿದೆ.

ವಿಧಾನಮಂಡಲ ಪ್ರವೇಶಿಸುವ ಪ್ರತಿಯೊಬ್ಬರೂ ಆರ್‌ಟಿ–ಪಿಸಿಆರ್‌ ಕೋವಿಡ್‌ ತಪಾಸಣಾ ನೆಗೆಟಿವ್‌ ವರದಿ ಹಾಜರುಪಡಿಸಬೇಕು. ಕಡ್ಡಾಯವಾಗಿ ಮಾಸ್ಕ್‌ ಧರಿಸಿರಬೇಕು. ಕೋವಿಡ್‌ ಲಕ್ಷಣಗಳಿದ್ದರೆ ಪ್ರತ್ಯೇಕವಾಗಿರಬೇಕು ಮತ್ತು ತಕ್ಷಣವೇ ಪರೀಕ್ಷಿಸಿಕೊಳ್ಳಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು