ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ಜಾರಿಗೆ ಬರುವುದೇ ಹೆಚ್ಚಿನ ನಿರ್ಬಂಧ? ಸಿಎಂ ಬೊಮ್ಮಾಯಿ ಸುಳಿವು

Last Updated 10 ಜನವರಿ 2022, 14:21 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗುತ್ತಿದ್ದು, ಮತ್ತಷ್ಟು ಬಿಗಿಯಾದ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಕೋವಿಡ್‌ ಪ್ರಕರಣ ಸಂಖ್ಯೆಯನ್ನು ಆಧರಿಸಿ ನಿರ್ಬಂಧ ಸಡಿಲಿಕೆ ಕುರಿತು ನಿರ್ಧರಿಸುವುದಾಗಿ ಹಿಂದೆ ಹೇಳಿದ್ದೆ. ಆದರೆ, ಈಗ ಪರಿಸ್ಥಿತಿ ಹಾಗಿಲ್ಲ. ದಿನದಿಂದ ದಿನಕ್ಕೆ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ನಿರ್ಬಂಧ ಹೆಚ್ಚಿಸಬೇಕಾದ ಸ್ಥಿತಿ ಇದೆ’ ಎಂದರು.

ಭಾನುವಾರ ರಾಜ್ಯದಲ್ಲಿ 12,000 ಹೊಸ ಕೋವಿಡ್‌ ಪ್ರಕರಣಗಳು ಪತ್ತೆಯಾಗಿವೆ. ಅವುಗಳಲ್ಲಿ 9,000 ಪ್ರಕರಣಗಳು ಬೆಂಗಳೂರಿನಲ್ಲಿ ದಾಖಲಾಗಿವೆ. ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳ ದೃಢಪ್ರಮಾಣ ದರ ಶೇಕಡ 6.8ರಷ್ಟಿದೆ. ಬೆಂಗಳೂರಿನಲ್ಲಿ ಈ ಪ್ರಮಾಣ ಶೇ 10 ತಲುಪಿದೆ. ಕೋವಿಡ್‌ ಪ್ರಕರಣಗಳಲ್ಲಿ ಕರ್ನಾಟಕವು ದೇಶದಲ್ಲೇ ಮೂರನೇ ಸ್ಥಾನದಲ್ಲಿದೆ. ಕೋವಿಡ್‌ ನಿಯಂತ್ರಿಸಲು ಮತ್ತಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT