ಶುಕ್ರವಾರ, ಅಕ್ಟೋಬರ್ 22, 2021
21 °C
ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ವಿತರಣೆ

ಕರ್ನಾಟಕದಲ್ಲಿ ಕ್ರೀಡೆಗೆ ಹೆಚ್ಚು ಪ್ರೋತ್ಸಾಹ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ಸಿಗುತ್ತಿದೆ. ಇದರ ಪ್ರಯೋಜನವನ್ನು ಕ್ರೀಡಾಪಟುಗಳು ಪಡೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ ನೀಡಿದರು.

ಟೋಕಿಯೊ ಒಲಿಂಪಿಕ್ಸ್ ಮತ್ತು ಪ್ಯಾರಾಲಿಂಪಿಕ್ಸ್‌ನಲ್ಲಿ ಭಾಗವಹಿಸಿದ ರಾಜ್ಯದ ಕ್ರೀಡಾಪಟುಗಳು ಮತ್ತು ಕೋಚ್‌ಗಳಿಗೆ ಪ್ರೋತ್ಸಾಹ ಧನ ವಿತರಿಸುವುದಕ್ಕಾಗಿ ರಾಜಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದದರು.

ಒಲಿಂಪಿಕ್ಸ್‌ಗೆ ತೆರಳಲು ಕ್ರೀಡಾಪಟುಗಳುಗೆ ತಲಾ ₹ 10 ಲಕ್ಷ ಪ್ರೋತ್ಸಾಹಧನ ನೀಡಲಾಗುತ್ತಿದೆ. ಮುಂದಿನ ಒಲಿಂಪಿಕ್ಸ್‌ಗೆ ಅಗತ್ಯ ತಯಾರಿ ಮಾಡುವಲ್ಲಿ ಸರ್ಕಾರ ಅಥ್ಲೀಟ್‌ಗಳ ಜೊತೆಗೆ ನಿಲ್ಲಲಿದೆ ಎಂದು ಅವರು ಭರವಸೆ ನೀಡಿದರು.

ಕ್ರೀಡಾ ಸಾಧಕರು ಕಠಿಣ ಪರಿಶ್ರಮದ ಮೂಲಕ ಸಾಮರ್ಥ್ಯ ಪ್ರದರ್ಶಿಸುತ್ತಾರೆ. ಅದನ್ನು ಸಮಾಜ ಗುರುತಿಸಬೇಕು. ಭಾರತದ ಕ್ರೀಡಾಪಟುಗಳು ದೊಡ್ದ ಸಾಹಸಿಗಳು ಎಂದು ಮುಖ್ಯಮಂತ್ರಿಗಳು ಬಣ್ಣಿಸಿದರು.

ಕನ್ನಡಿಗರಾದ ಸುಹಾಸ್, ಅದಿತಿ ಅಶೋಕ್, ಉತ್ತಪ್ಪ, ಕೆ.ಸಿ.ಗಣಪತಿ, ಸುಬೇದಾರ್ ಕುಟ್ಟಪ್ಪ ಅವರನ್ನು ಸನ್ಮಾನಿಸಿ ನಗದು ಪುರಸ್ಕಾರ ನೀಡಲಾಯಿತು.

ರಾಜ್ಯಪಾಲ ಥಾವರಚಂದ್ ಗೆಹಲೋತ್‌, ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಕೆ.ಸಿ. ನಾರಾಯಣಗೌಡ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು