ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘2,684 ಶಾಲಾ ಕಟ್ಟಡ ಪೂರ್ಣ: ಸಚಿವ ಸಿ.ಸಿ.ಪಾಟೀಲ

Last Updated 8 ಡಿಸೆಂಬರ್ 2021, 21:11 IST
ಅಕ್ಷರ ಗಾತ್ರ

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ₹756 ಕೋಟಿ ವೆಚ್ಚದಲ್ಲಿ 3,423 ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕಟ್ಟಡಗಳನ್ನು ನಿರ್ಮಿಸುತ್ತಿದ್ದು, ಈ ಪೈಕಿ 2,684 ಕಟ್ಟಡಗಳ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ತಿಳಿಸಿದ್ದಾರೆ.

ಉಳಿದ ಕಟ್ಟಡಗಳ ಕಾಮಗಾರಿಗಳು ಮುಕ್ತಾಯದ ಹಂತದಲ್ಲಿವೆ. ಈ ಯೋಜನೆಯನ್ನು ನಬಾರ್ಡ್‌ನ ಆರ್‌ಐಡಿ ಎಫ್‌–25 ಅನ್ವಯ ಜಾರಿಗೊಳಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಗಳ ಸಹಯೋಗದಲ್ಲಿ ಸುಸಜ್ಜಿತ ಶಾಲೆ, ಪ್ರೌಢಶಾಲೆಗಳ ಕಟ್ಟಡಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಅಂಗನವಾಡಿ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಹೆಚ್ಚಿನ ಸೌಲಭ್ಯ ಮತ್ತು ಸುರಕ್ಷತೆ ಕಲ್ಪಿಸಿಕೊಡುವ ಉದ್ದೇಶದಿಂದ ಲೋಕೋಪಯೋಗಿ ಇಲಾಖೆ ಈ ಕಟ್ಟಡಗಳನ್ನು ನಿರ್ಮಾಣದ ಜವಾಬ್ದಾರಿ ವಹಿಸಿಕೊಂಡಿದೆ ಎಂದು ಅವರು ವಿವರಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದೊಂದಿಗೆ ₹137 ಕೋಟಿ ವೆಚ್ಚದಲ್ಲಿ ಒಟ್ಟು 842 ಸುಸಜ್ಜಿತ ಅಂಗನವಾಡಿ ಕೇಂದ್ರಗಳನ್ನು ನಿರ್ಮಿಸುವ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಪೈಕಿ 525 ಕಾಮಗಾರಿಗಳನ್ನು ಈಗಾಗಲೇ ಪೂರ್ಣಗೊಳಿಸಲಾಗಿದೆ. ಉಳಿದವುಗಳನ್ನು ಫೆಬ್ರುವರಿ ಅಂತ್ಯದೊಳಗೆ ಪೂರ್ಣಗೊಳಿಸಲಾಗುವುದು ಎಂದು ಪಾಟೀಲ ಹೇಳಿದರು.

ಗ್ರಾಮೀಣ ಭಾಗಗಳಲ್ಲಿ ಹೆಚ್ಚಿನ ಮಕ್ಕಳನ್ನು ಶಾಲೆಗಳತ್ತ ಆಕರ್ಷಿಸಿ ಹೊಸ ಶೈಕ್ಷಣಿಕ ಕ್ರಾಂತಿಗೆ ಅವಕಾಶವಾಗುವ ನಿಟ್ಟಿನಲ್ಲಿ ಈ ಯೋಜನೆಯು ತುಂಬಾ ಸಹಕಾರಿಯಾಗಲಿದೆ ಎಂಬ ಆಶಯ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT