ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಯಂದಿರ ಮರಣ ಪ್ರಮಾಣ ಶೇ 7ರಷ್ಟು ಇಳಿಕೆ

2020-21ನೇ ಸಾಲಿನ ಮೊದಲ ತ್ರೈಮಾಸಿಕ ವರದಿ ಬಿಡುಗಡೆ
Last Updated 1 ಸೆಪ್ಟೆಂಬರ್ 2020, 20:42 IST
ಅಕ್ಷರ ಗಾತ್ರ

ಬೆಂಗಳೂರು: ಆರೋಗ್ಯ ಇಲಾಖೆಯು ತಾಯಿ ಆರೋಗ್ಯ ಕಾರ್ಯಕ್ರಮದಮೊದಲ ತ್ರೈಮಾಸಿಕ ವರದಿಯನ್ನು ಬಿಡುಗಡೆ ಮಾಡಿದ್ದು, ತಾಯಂದಿರ ಮರಣ ಪ್ರಮಾಣದಲ್ಲಿ ಶೇ 7 ರಷ್ಟು ಇಳಿಕೆಯಾಗಿದೆ.

ಮರಣ ಪ್ರಮಾಣ ದರ ಕಡಿಮೆ ಮಾಡಲು ರಾಜ್ಯದಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕಳೆದ ಸಾಲಿನ ಮೊದಲ ತ್ರೈಮಾಸಿಕದಲ್ಲಿ ( ಏಪ್ರಿಲ್–ಜೂನ್) 210 ತಾಯಂದಿರುರಾಜ್ಯದಲ್ಲಿ ಮೃತಪಟ್ಟಿದ್ದರು. ಪ್ರಸಕ್ತ ಸಾಲಿನಲ್ಲಿ ಮೂರು ತಿಂಗಳ ಅವಧಿಯಲ್ಲಿ 195 ಮಹಿಳೆಯರು ಹೆರಿಗೆ ವೇಳೆ ಸಾವಿಗೀಡಾಗಿದ್ದಾರೆ ಎಂದು ಇಲಾಖೆ ಮಾಹಿತಿ ನೀಡಿದೆ.

‘ಲಾಕ್‌ ಡೌನ್ ಹಾಗೂ ಕೋವಿಡ್ ನಡುವೆಯೂಗರ್ಭಿಣಿಯರಿಗೆ ಯಾವುದೇ ತೊಂದರೆಯಾಗದಂತೆ ರಾಜ್ಯದ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ವ್ಯವಸ್ಥೆ ಮಾಡಲಾಗಿತ್ತು. ಶುಲ್ಕರಹಿತ ಸಹಾಯವಾಣಿ ಮೂಲಕಸಂಪರ್ಕಿಸಿದವರಿಗೆ ಅಗತ್ಯ ಔಷಧ ಸಾಮಗ್ರಿಗಳನ್ನು ಸೂಕ್ತ ಸಮಯಕ್ಕೆ ತಲುಪಿಸಲಾಗುತ್ತಿದೆ. ಗರ್ಭಿಣಿಯರಿಗೆ ಪ್ರೋತ್ಸಾಹ ಧನ ವಿತರಣೆ, ಔಷಧ ವಿತರಣೆ, ಪೌಷ್ಟಿಕ ಆಹಾರ ವಿತರಣೆ, ಸ್ಥಳಾಂತರಕ್ಕೆ ಸಾರಿಗೆ ವ್ಯವಸ್ಥೆ ಸೇರಿದಂತೆ ಹಲವು ಸೌಲಭ್ಯಗಳನ್ನು ನೀಡಲಾಗುತ್ತಿದೆ’ ಎಂದು ತಾಯಿ ಆರೋಗ್ಯ ಕಾರ್ಯಕ್ರಮಗಳ ಉಪನಿರ್ದೇಶಕ ಡಾ. ರಾಜ್‌ಕುಮಾರ್ ತಿಳಿಸಿದರು.

‘ಲಾಕ್‌ಡೌನ್ ಅವಧಿಯಲ್ಲಿ ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಸಾಕಷ್ಟು ಸಮಸ್ಯೆಯಾಗಿದೆ ಎಂಬ ತಪ್ಪುಕಲ್ಪನೆಗಳು ಜನರಲ್ಲಿವೆ. ಆ ಅವಧಿಯಲ್ಲಿ ಕೂಡ ಆರೋಗ್ಯ ಕೇಂದ್ರಗಳಲ್ಲಿ ಹೆರಿಗೆ ವಿಚಾರದಲ್ಲಿ ತಾರತಮ್ಯ ಮಾಡದೆ ಹೆರಿಗೆ ಮಾಡಿಸಿ, ಅಗತ್ಯ ಸೌಲಭ್ಯಗಳನ್ನು ನೀಡಲಾಗಿದೆ. ಪ್ರಸಕ್ತ ಸಾಲಿನ ಮೊದಲ ತ್ರೈಮಾಸಿಕದಲ್ಲಿಒಟ್ಟು 2.5 ಲಕ್ಷ ಹೆರಿಗೆಯಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT