ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 4,015 ಕೋಟಿ ಹೂಡಿಕೆ ಒಪ್ಪಂದಕ್ಕೆ ಸಹಿ

ಸಿ4ವಿ ಕಂಪನಿಯ ಬ್ಯಾಟರಿ ತಯಾರಿಕಾ ಘಟಕ
Last Updated 2 ಜುಲೈ 2021, 4:29 IST
ಅಕ್ಷರ ಗಾತ್ರ

ಬೆಂಗಳೂರು: ಅಮೆರಿಕದ ಸಿ4ವಿ ಕಂಪನಿಯು ರಾಜ್ಯದಲ್ಲಿ ಐದು ಲೀಥಿಯಮ್‌ ಅಯಾನ್‌ ಬ್ಯಾಟರಿ ತಯಾರಿಕಾ ಘಟಕಗಳನ್ನು ಸ್ಥಾಪಿಸಲು ಮುಂದಾಗಿದ್ದು, ಇದಕ್ಕಾಗಿ ₹ 4,015 ಕೋಟಿ ಹೂಡಿಕೆ ಮಾಡುವ ಒಪ್ಪಂದಕ್ಕೆ ಸಹಿ ಹಾಕಿದೆ.

ಒಪ್ಪಂದದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌, ‘ಸಿ4ವಿ ಕಂಪನಿ ಲೀಥಿಯಮ್‌ ಬ್ಯಾಟರಿಗಳ ತಯಾರಿಕೆಯಲ್ಲಿ ಮುಂಚೂಣಿಯಲ್ಲಿದೆ. ರಾಜ್ಯದಲ್ಲಿ ಐದು ಘಟಕಗಳನ್ನು ಸ್ಥಾಪಿಸಲಿದ್ದು, ಇದರಿಂದ 4,000 ಉದ್ಯೋಗಗಳು ಸೃಷ್ಟಿಯಾಗಲಿವೆ’ ಎಂದರು.

ವಿದ್ಯುತ್‌ ಚಾಲಿತ ವಾಹನಗಳ ಬಳಕೆಗೆ ಪೂರಕವಾಗಿ ಬ್ಯಾಟರಿ ತಯಾರಿಕಾ ಘಟಕಗಳು ಆರಂಭವಾಗುತ್ತಿವೆ. ಸಿ4ವಿ ಕಂಪನಿ ಮುಂದಿನ ವರ್ಷವೇ ಈ ಘಟಕಗಳ ಕಾಮಗಾರಿ ಆರಂಭಿಸಲಿದೆ. ಬ್ಯಾಟರಿ ತಯಾರಿಕಾ ಕ್ಷೇತ್ರದ ಇನ್ನೂ ಹಲವು ಕಂಪನಿಗಳು ರಾಜ್ಯದಲ್ಲಿ ಹೂಡಿಕೆಗೆ ಆಸಕ್ತಿ ತೋರಿವೆ ಎಂದು ಹೇಳಿದರು.

ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜ್‌ ಕುಮಾರ್‌ ಖತ್ರಿ, ಕೈಗಾರಿಕಾಭಿವೃದ್ದಿ ಆಯುಕ್ತೆ ಗುಂಜನ್‌ ಕೃಷ್ಣ, ಸಿ4ವಿ ಕಂಪನಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಶೈಲೇಶ್‌ ಉಪ್ರೇತಿ, ಉಪಾಧ್ಯಕ್ಷ ಕುಲದೀಪ್‌ ಗುಪ್ತಾ, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ರೇವಣ್ಣ ಗೌಡ, ಇನ್‌ವೆಸ್ಟ್‌ ಕರ್ನಾಟಕ ಫೋರಂ ಮುಖ್ಯ ಕಾರ್ಯಾಚರಣೆ ಅಧಿಕಾರಿ ಬಿ.ಕೆ ಶಿವಕುಮಾರ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT