ಭಾನುವಾರ, ಜೂನ್ 20, 2021
24 °C

ಸಂಸದ ಅನಂತಕುಮಾರ್ ಹೆಗಡೆ ಅವರಿದ್ದ ಇಂಡಿಗೊ ವಿಮಾನ ಒಂದೂವರೆ ಗಂಟೆ ತಡವಾಗಿ ಲ್ಯಾಂಡ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Ananth kumar hegde

ಹುಬ್ಬಳ್ಳಿ: ಬೆಂಗಳೂರಿನಿಂದ ಬೆಳಿಗ್ಗೆ ಹೊರಟ ವಿಮಾನ ನಿರಂತರ ಮಳೆ ಹಾಗೂ ಮೋಡಕವಿದ ವಾತಾವರಣದಿಂದ ಒಂದೂವರೆ ಗಂಟೆ ತಡವಾಗಿ ವಾಣಿಜ್ಯ ‌ನಗರಿಯಲ್ಲಿ ಲ್ಯಾಂಡ್ ಆಗಿದೆ. ಈ ವಿಮಾನದಲ್ಲಿ ಸಂಸದ ಅನಂತಕುಮಾರ್ ಹೆಗಡೆ ಕೂಡ ಇದ್ದರು.

ಇಂಡಿಗೊ ಸಂಸ್ಥೆಯ 6E 7162 ವಿಮಾನ ಬೆಳಿಗ್ಗೆ 7.50ಕ್ಕೆ ಬೆಂಗಳೂರಿನಿಂದ ಹೊರಟಿತ್ತು. 8.50ಕ್ಕೆ ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗಬೇಕಿತ್ತು. ಆದರೆ ಒಂದೂವರೆ ತಾಸು ಅಗಸದಲ್ಲಿ ಸುತ್ತಾಡಿ 10.20ಕ್ಕೆ ಭೂ ಸ್ಪರ್ಶ ಮಾಡಿದೆ.

ವಿಮಾನದಲ್ಲಿ ಸಾಕಷ್ಟು ಇಂಧನ  ಸಂಗ್ರಹವಿತ್ತು. ಹೀಗಾಗಿ ಎನೂ ತೊಂದರೆ ಇರಲಿಲ್ಲ. ವಾತಾವರಣ ಸಮಸ್ಯೆಯಿಂದ ತಡವಾಗಿ ಲ್ಯಾಂಡ್ ಆಗಿದೆ. ಸ್ಥಳೀಯ ವಾತಾವರಣ ಹಾಗೂ ಲ್ಯಾಂಡಿಂಗ್ ತಡವಾಗುವುದರ ಬಗ್ಗೆ ಮೊದಲೇ‌ ಮಾಹಿತಿ ಇತ್ತು ಎಂದು ಇಂಡಿಗೊ ಸಂಸ್ಥೆಯ ಸಿಬ್ಬಂದಿಯೊಬ್ಬರು ಪ್ರಜಾವಾಣಿಗೆ ತಿಳಿಸಿದರು. ಈ ವಿಮಾನದಲ್ಲಿ 40 ಪ್ರಯಾಣಿಕರು ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು