ಸೋಮವಾರ, ಆಗಸ್ಟ್ 15, 2022
23 °C

ಸಂಸದ ಅನಂತಕುಮಾರ್ ಹೆಗಡೆಗೆ ಕೋವಿಡ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿರಸಿ: ಸಂಸದ ಅನಂತಕುಮಾರ್ ಹೆಗಡೆ ಅವರಿಗೆ ಎರಡು ದಿನಗಳ ಹಿಂದೆಯೆ ಕೋವಿಡ್ ದೃಢಪಟ್ಟಿದೆ.

ಸೋಮವಾರದಿಂದ ಸಂಸತ್ ಅಧಿವೇಶನ ಆರಂಭವಾಗುವ ಹಿನ್ನೆಲೆಯಲ್ಲಿ ಶುಕ್ರವಾರ ಅವರು ಹುಬ್ಬಳ್ಳಿಯಿಂದ ದೆಹಲಿಗೆ ವಿಮಾನದ ಮೂಲಕ ತೆರಳಿದ್ದರು. ಅಲ್ಲಿಗೆ ತಲುಪಿದ ಬಳಿಕ ಎನ್ ಐಸಿಪಿಆರ್ ಆಸ್ಪತ್ರೆಯಲ್ಲಿ ಕೋವಿಡ್ ತಪಾಸಣೆಗೊಳಪಟ್ಟಿದ್ದರು. ಈ ವೇಳೆ ಅವರಿಗೆ ಸೋಂಕು ಇರುವುದು ದೃಢಪಟ್ಟಿದೆ. 

ಆದರೆ ಅನಂತಕುಮಾರ್ ಗೆ ಸೋಂಕಿನ ಯಾವುದೇ ಲಕ್ಷಣವಿರಲಿಲ್ಲ. ಹೀಗಾಗಿ ಅವರು ದೆಹಲಿಯ ನಿವಾಸದಲ್ಲಿ ಕ್ವಾರಂಟೈನ್ ಗೊಳಪಟ್ಟಿದ್ದಾರೆ. ಶಿರಸಿಯ ಅವರ ನಿವಾಸಕ್ಕೆ ಆರೋಗ್ಯ ಇಲಾಖೆ ಸಿಬ್ಬಂದಿ ತೆರಳಿ ಕುಟುಂಬದವರ ಗಂಟಲುದ್ರವ ಪರೀಕ್ಷಿಸಿದ್ದು ಅವರೆಲ್ಲರ ವರದಿ ನೆಗೆಟಿವ್ ಬಂದಿದೆ ಎಂದು ಸಂಸದರ ಆಪ್ತರೋರ್ವರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು