ಗುರುವಾರ , ಸೆಪ್ಟೆಂಬರ್ 23, 2021
28 °C

ಡಿ.ಕೆ.ಶಿವಕುಮಾರ್ ಅವರು ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ: ಸಂಗಣ್ಣ ಕರಡಿ

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಾನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಲಾಗಿದೆ. ನಾನು ಯಾರನ್ನೂ ಭೇಟಿ ಮಾಡಿಲ್ಲ. ಡಿ.ಕೆ ಶಿವಕುಮಾರ್ ಅವರು ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕೊಪ್ಪಳ ಸಂಸದ ಸಂಗಣ್ಣ ಕರಡಿ ಹೇಳಿದ್ದಾರೆ.

ಸಂಸದರು, ನಾನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿರುವುದಾಗಿ ಅವರ (ಡಿ.ಕೆ ಶಿವಕುಮಾರ್) ಟ್ವಿಟರ್‌ ಹ್ಯಾಂಡಲ್‌ನಲ್ಲಿ ಪೋಸ್ಟ್‌ ಮಾಡಲಾಗಿದೆ ಎಂದು ಸ್ಕ್ರೀನ್‌ ಶಾಟ್‌ಗಳನ್ನು ಹಂಚಿಕೊಂಡಿದ್ದಾರೆ.

ಡಿ.ಕೆ ಶಿವಕುಮಾರ್ ಅವರ ಟ್ವಿಟರ್‌ ಹ್ಯಾಂಡಲ್‌ನಲ್ಲಿ ಇದಕ್ಕೆ ಸಂಬಂಧಿಸಿದ ಯಾವುದೇ ಟ್ವೀಟ್‌ಗಳಿಲ್ಲ. ಆದರೆ, ಸಂಸದರ ಪೋಸ್ಟ್ ಪ್ರಕಾರ ಡಿ.ಕೆ. ಶಿವಕುಮಾರ್‌ ಅವರು ತಮ್ಮ ಟ್ವಿಟರ್‌ ಪುಟದಲ್ಲಿ, ʼನನ್ನ ನಿವಾಸದಲ್ಲಿ ಲೋಕಸಭಾ ಸದಸ್ಯರಾದ ಶ್ರೀ ಕರಡಿ ಸಂಗಣ್ಣ ಅಮರಪ್ಪ, ಶಾಸಕರಾದ ಶ್ರೀ ಬಸನಗೌಡ ದದ್ದಲ್‌, ಶಾಸಕರಾದ ಶ್ರೀ ಪಿ.ಟಿ. ಪರಮೇಶ್ವರ್‌ ನಾಯಕ್‌, ವಿಧಾನ ಪರಿಷತ್‌ ಸದಸ್ಯ ಶ್ರೀ ಎಸ್‌ಎಲ್‌ ಘೋಟ್ನೇಕರ್‌, ಮಾಜಿ ಮಂತ್ರಿಗಳಾದ ಶ್ರೀ ಮಲ್ಲಿಕಾರ್ಜುನ್‌ ನಾಗಪ್ಪ ಅವರನ್ನು ಭೇಟಿ ಮಾಡಿ, ಬೇರುಮಟ್ಟದಿಂದ ಪಕ್ಷ ಬಲಗೊಳಿಸುವ ಬಗ್ಗೆ ಚರ್ಚೆ ನಡೆಸಿದೆವುʼ ಎಂದು ಬರೆದುಕೊಂಡಿದ್ದಾರೆ ಎನ್ನಲಾಗಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು