ಸೋಮವಾರ, ಏಪ್ರಿಲ್ 12, 2021
31 °C

ಸಂಸದ ಸಿದ್ದೇಶ್ವರ, ಡಾ.ರಮೇಶ್‌ಗೆ ಗೌರವ ಡಾಕ್ಟರೇಟ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಇಲ್ಲಿನ ಬಿಜೆಪಿ ಸಂಸದ ಜಿ.ಎಂ. ಸಿದ್ದೇಶ್ವರ ಹಾಗೂ ರಾಷ್ಟ್ರೀಯ ವೈದ್ಯಕೀಯ ಆಯೋಗದ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಮಂಡಳಿಯ ಅಧ್ಯಕ್ಷ ಡಾ.ಎಂ.ಕೆ. ರಮೇಶ್ ಅವರನ್ನು ದಾವಣಗೆರೆ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್‌ ಪದವಿಗೆ ಆಯ್ಕೆ ಮಾಡಲಾಗಿದೆ.

‘ಗೌರವ ಡಾಕ್ಟರೇಟ್‌ ಪದವಿಯ ಪಟ್ಟಿಯನ್ನು ಆಯ್ಕೆಮಾಡುವ ಸಮಿತಿ ಮುಂದೆ ಏಳೆಂಟು ಅರ್ಜಿಗಳು ಬಂದಿದ್ದವು. ಜಿ.ಎಂ. ಸಿದ್ದೇಶ್ವರ ಹಾಗೂ ಡಾ.ಎಂ.ಕೆ. ರಮೇಶ್‌ ಜೊತೆಗೆ ಇತಿಹಾಸಕಾರ, ಸಂಶೋಧಕ ಲಕ್ಷ್ಮಣ ತೆಲಗಾವಿ ಅವರ ಹೆಸರನ್ನೂ ರಾಜ್ಯಪಾಲರಿಗೆ ಕಳುಹಿಸಿಕೊಡಲಾಗಿತ್ತು. ಇಬ್ಬರಿಗೆ ಮಾತ್ರ ಗೌರವ ಡಾಕ್ಟರೇಟ್‌ ಪದವಿ ನೀಡಲು ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದು, ಗುರುವಾರ (ಏ.8) ನಡೆಯಲಿರುವ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವದಲ್ಲಿ ಪದವಿ ಪ್ರದಾನ ಮಾಡಲಾಗುವುದು’ ಎಂದು ಕುಲಪತಿ ಪ್ರೊ. ಶರಣಪ್ಪ ವಿ.ಹಲಸೆ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಎಲೆ ಮರೆಯಲ್ಲಿದ್ದುಕೊಂಡು ಸಾಧನೆ ಮಾಡುತ್ತಿರುವವರನ್ನು ಗೌರವ ಡಾಕ್ಟರೇಟ್‌ ಪದವಿಗೆ ಆಯ್ಕೆ ಮಾಡುವ ಬದಲು ರಾಜಕೀಯ ನಾಯಕರನ್ನು ಪರಿಗಣಿಸಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ‘ಆಯ್ಕೆ ಸಮಿತಿಯ ಮುಂದೆ ಬಂದ ಅರ್ಜಿಗಳನ್ನಷ್ಟೇ ಪರಿಗಣನೆಗೆ ತೆಗೆದುಕೊಳ್ಳುವ ವ್ಯವಸ್ಥೆ ಇದೆ. ಈ ಹಿಂದೆ ರಾಜ್ಯಪಾಲರು ರಾಜಕೀಯ ಮುಖಂಡರ ಹೆಸರನ್ನು ಕಳುಹಿಸುವುದು ಬೇಡ ಎಂದು ಸೂಚಿಸಿದ್ದರು. ಈ ವರ್ಷ ಪರಿಗಣಿಸಿದ್ದಾರೆ. ಸಮಾಜ ಸೇವೆ, ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಂಸದರು ದಾವಣಗೆರೆ ಜಿಲ್ಲೆಯ ಅಭಿವೃದ್ಧಿಗೆ ಬಹಳಷ್ಟು ಕೊಡುಗೆ ನೀಡಿದ್ದಾರೆ. ಅದೇ ರೀತಿ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಡಾ. ರಮೇಶ್‌ ಅವರೂ ದಾವಣಗೆರೆ ಜಿಲ್ಲೆಯ ಮಾಯಕೊಂಡ ಮೂಲದವರಾಗಿದ್ದಾರೆ’ ಎಂದು ಕುಲಪತಿ ಸಮರ್ಥಿಸಿಕೊಂಡರು.

ಸಿದ್ದೇಶ್ವರ ಅವರು 2004ರಿಂದ ಸತತವಾಗಿ ನಾಲ್ಕು ಬಾರಿ ಸಂಸದರಾಗಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು