ಬುಧವಾರ, ಜನವರಿ 27, 2021
21 °C
ತೊಗರಿ ಖರೀದಿ ಕೇಂದ್ರ ಪ್ರಾರಂಭಿಸಲು ಒತ್ತಾಯ

‘ಸಣ್ಣ ರೈತರಿಗೆ ಬೆಂಬಲ ಬೆಲೆ ಲಾಭ ಸಿಗಲಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ತಾಪುರ: ತೊಗರಿ ಬೆಳೆ ಕಟಾವಿಗೆ ಬಂದಿವೆ. ತೊಗರಿ ಬೆಳೆದ ಸಣ್ಣ ರೈತರಿಗೆ ಸರ್ಕಾರದ ಬೆಂಬಲ ಬೆಲೆ ಲಾಭ ಸಿಗಬೇಕು. ಸರ್ಕಾರ ಮತ್ತು ಜಿಲ್ಲಾಡಳಿತ ಬೇಗ ತೊಗರಿ ಖರೀದಿ ಕೇಂದ್ರ ಪ್ರಾರಂಭಿಸಬೇಕು ಎಂದು ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ ಕರದಾಳ ಅವರು ಒತ್ತಾಯಿಸಿದ್ದಾರೆ.

ಪ್ರತಿ ವರ್ಷ ತೊಗರಿ ಬೆಳೆ ಕಟಾವು ಮಾಡಿ ರೈತರು ತೊಗರಿ ಉತ್ಪನ್ನ ಮಾರುಕಟ್ಟೆಯಲ್ಲಿ ಮಾರಾಟ ಮಾಡಿದ ನಂತರ ಜಿಲ್ಲಾಡಳಿತ ಮತ್ತು ಸರ್ಕಾರ ತೊಗರಿ ಖರೀದಿ ಕೇಂದ್ರ ಪ್ರಾರಂಭಿಸುತ್ತದೆ. ಇದರಿಂದ ರಾಶಿ ಮಾಡಿದ ರೈತರು ಕಡಿಮೆ ಬೆಲೆಗೆ ತೊಗರಿ ಮಾರಿಕೊಳ್ಳುತ್ತಾರೆ ಎಂದು ಅವರು ಹೇಳಿದ್ದಾರೆ.

ಕೃಷಿ ಕೆಲಸಗಳಿಗೆ ರೈತರು ಸಾಲ ಮಾಡಿ ಬೆಳೆ ಬೆಳೆದಿರುತ್ತಾರೆ. ತೊಗರಿ ರಾಶಿ ಮಾಡಿದ ನಂತರ ಮಾರಾಟಕ್ಕೆ ಮುಂದಾಗುತ್ತಾರೆ. ಎಲ್ಲಾ ಸಣ್ಣ ರೈತರು ಬೇಗ ತೊಗರಿ ಮಾರುವುದರಿಂದ ತಡವಾಗಿ ಪ್ರಾರಂಭಿಸುವ ತೊಗರಿ ಖರೀದಿ ಕೇಂದ್ರದ ಬೆಂಬಲ ಬೆಲೆ ಸಿಗುವುದೇ ಇಲ್ಲ. ಕಟಾವಿಗೆ ಮುಂಚೆ ಖರೀದಿ ಪ್ರಕ್ರಿಯೆಗೆ ಅಗತ್ಯ ಸಿದ್ಧತೆ ಮಾಡಿಕೊಂಡು ಕೇಂದ್ರಗಳು ಶುರು ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ತೊಗರಿ ಬೆಳೆ ಹೂವಾಡುವ ಹಂತದಲ್ಲೆ ಸರ್ಕಾರ ತೊಗರಿ ಬೆಳೆಗಾರರ ಹಿತ ರಕ್ಷಣೆಗೆ ಕ್ರಮ ಕೈಗೊಂಡು ತೊಗರಿ ಮಂಡಳಿಗೆ ಅಗತ್ಯ ಅನುದಾನ ನೀಡಿ ಮತ್ತು ಬೆಂಬಲ ಬೆಲೆ ಘೋಷಣೆ ಮಾಡಬೇಕು. ರಾಶಿ ಮಾಡಿದ ತಕ್ಷಣ ರೈತರು ಬೆಂಬಲ ಬೆಲೆಯಲ್ಲಿ ಮಾರಾಟ ಮಾಡಲು ಅನುಕೂಲ ಮಾಡಿಕೊಡಬೇಕು ಎಂದು ಅವರು ಹೇಳಿದ್ದಾರೆ. ತೊಗರಿ ಬೆಳೆ ರೈತರ ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ಈ ಭಾಗದ ತೊಗರಿ ಬೆಳೆಗಾರರ ಹಿತರಕ್ಷಣೆಗೆ ತೊಗರಿ ಮಂಡಳಿ, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಡಳಿತ, ರಾಜ್ಯ ಸರ್ಕಾರ ಮುಂದಾಲೋಚನೆ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.