ಬುಧವಾರ, ಮೇ 18, 2022
24 °C

ಪಕ್ಷಾಂತರ ಹೇಳಿಕೆ: ಉಲ್ಟಾ ಹೊಡೆದ ಎಂಟಿಬಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಒಂದು ಪಕ್ಷ ತೊರೆದು ಇನ್ನೊಂದು ಪಕ್ಷ ಸೇರಿರುವುದು ರಾಜಕೀಯ ಜೀವನದಲ್ಲಿ ನಾನು ಮಾಡಿದ ಮೊದಲ ತಪ್ಪು’ ಎಂದು ಹೇಳಿಕೆ ನೀಡಿದ್ದ ಪೌರಾಡಳಿತ ಸಚಿವ ಎಂ.ಟಿ.ಬಿ.ನಾಗರಾಜ್‌ ಅವರು ಈಗ ಉಲ್ಟಾ ಹೊಡೆದಿದ್ದಾರೆ.

‘ಬಿಜೆಪಿ ಬಗ್ಗೆ ಯಾವುದೇ ಅಸಮಾಧಾನವಿಲ್ಲ. ನನ್ನ ಹೇಳಿಕೆಯ ಬಗ್ಗೆ ಯಾವುದೇ ರೀತಿ ಅಪಾರ್ಥ ಕಲ್ಪಿಸುವುದೂ ಬೇಡ. ಪಕ್ಷಾಂತರ ಕುರಿತ ನನ್ನ ಹೇಳಿಕೆ ಸೈದ್ಧಾಂತಿಕವಾದುದು. ಯಾರೇ ಆಗಲಿ ಪಕ್ಷಾಂತರ ಮಾಡುವುದು ತಪ್ಪು ಎಂಬ ಅರ್ಥದಲ್ಲಿ ಹೇಳಿದ್ದೇನೆ’ ಎಂದಿದ್ದಾರೆ.

‘ಬಿಜೆಪಿ ಬಗ್ಗೆ ಅಸಮಾಧಾನವೂ ಇಲ್ಲ, ಬಿಜೆಪಿಗೆ ಬಂದಿರುವುದು ತಪ್ಪು ಎಂದು ಭಾವಿಸಿಯೂ ಇಲ್ಲ. ಪಕ್ಷದಲ್ಲಿ ಎಲ್ಲ ನಾಯಕರು ವಿಶ್ವಾಸದಿಂದ ನಡೆಸಿಕೊಂಡಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.

‘ರಾಜಕೀಯದಲ್ಲಿ ನಾನು ಹಣ ಮಾಡಬೇಕು ಎಂದೇನಿಲ್ಲ. ಆ ವಿಷಯದಲ್ಲಿ ನಾನು ಇಂದಿಗೂ ಪರಿಶುದ್ಧನಾಗಿದ್ದೇನೆ. ರಾಜಕೀಯ ಜೀವನದಲ್ಲಿ ನಾನು ಮಾಡಿದ ಒಂದೇ ಒಂದು ತಪ್ಪು ಎಂದರೆ, ಒಂದು ಪಕ್ಷ ಬಿಟ್ಟು ಮತ್ತೊಂದು ಪಕ್ಷಕ್ಕೆ ಸೇರಿರುವುದು. ಅದರ ಅರಿವು ಈಗ ಆಗುತ್ತಿದೆ. ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಕಡೆಯವರೇ ನನ್ನನ್ನು ಪಕ್ಷದಿಂದ ಹೊರಗೆ ಕಳುಹಿಸಿದರು’ ಎಂದು ಇತ್ತೀಚೆಗೆ ಬಾಗೇಪಲ್ಲಿಯಲ್ಲಿ ನಡೆದ ಸಭೆಯಲ್ಲಿ ಹೇಳಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು