ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಪ್ಪು ಶಿಲೀಂಧ್ರ–ನೀವು ಕೊಟ್ಟ ಔಷಧ ಸಾಕೇ: ಸದಾನಂದ ಗೌಡರಿಗೆ ಕಾಂಗ್ರೆಸ್ ಪ್ರಶ್ನೆ

Last Updated 1 ಜೂನ್ 2021, 6:24 IST
ಅಕ್ಷರ ಗಾತ್ರ

ಬೆಂಗಳೂರು: ಕಪ್ಪು ಶಿಲೀಂಧ್ರ (ಬ್ಲ್ಯಾಕ್‌ ಫಂಗಸ್) ಸೋಂಕಿನ ಚಿಕಿತ್ಸೆಯಲ್ಲಿ ಬಳಸುವ ಆ್ಯಂಫೋಟೆರಿಸಿನ್-ಬಿ ಔಷಧ ಹಂಚಿಕೆ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಅಸಮಾಧಾನ ವ್ಯಕ್ತಪಡಿಸಿದೆ.

ಕೇಂದ್ರ ಸರ್ಕಾರವು 1,930 ಆ್ಯಂಫೋಟೆರಿಸಿನ್-ಬಿ ವಯಲ್ಸ್‌ಗಳನ್ನು ಕರ್ನಾಟಕಕ್ಕೆ ಹಂಚಿಕೆ ಮಾಡಿದೆ. ಈ ಕುರಿತು ಔಷಧ ಇಲಾಖೆಯನ್ನೂ ಹೊಂದಿರುವ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಟ್ವೀಟ್‌ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ರಾಜ್ಯದಲ್ಲಿರುವ ಸೋಂಕಿತರ ಸಂಖ್ಯೆಗೆ ಸಂಬಂಧಿಸಿದ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ, ‘ಸದಾನಂದ ಗೌಡ ಅವರೇ, ಆ್ಯಂಫೋಟೆರಿಸಿನ್-ಬಿ ಔಷಧವನ್ನು ರಾಜ್ಯಕ್ಕೆ 1930 ವಯಲ್ಸ್ ಹಂಚಿಕೆ ಮಾಡಿದ್ದೇವೆಂದು ಹೆಮ್ಮೆಯಿಂದ ಹೇಳಿದ್ದೀರಿ. ರಾಜ್ಯದಲ್ಲಿ 1319 ಸೋಂಕಿತರಿದ್ದಾರೆಂದು ವರದಿಗಳು ಹೇಳುತ್ತಿವೆ, ಒಬ್ಬ ಸೋಂಕಿತನ ಚಿಕಿತ್ಸೆಗೆ 50ರಿಂದ 90 ವಯಲ್ಸ್ ಬೇಕು. ನೀವು ಕೊಟ್ಟಿದ್ದು ಎಷ್ಟು ಜನರಿಗೆ ಸಾಲುತ್ತದೆಂದು ಅರಿವಿದೆಯೇ’ ಎಂದು ಪ್ರಶ್ನಿಸಿದೆ.

ಕಪ್ಪು ಶಿಲೀಂಧ್ರ ರೋಗದ ಚಿಕಿತ್ಸೆಗೆ ವಿವಿಧ ರಾಜ್ಯಗಳಿಗೆ ಹೆಚ್ಚುವರಿಯಾಗಿ ಒಟ್ಟು 30,100 ಆ್ಯಂಫೋಟೆರಿಸಿನ್-ಬಿ ವಯಲ್ಸ್‌ಗಳನ್ನು ಕೇಂದ್ರ ಸರ್ಕಾರ ಸೋಮವಾರ ಹಂಚಿಕೆ ಮಾಡಿದೆ. ಇದರಲ್ಲಿ ಕರ್ನಾಟಕಕ್ಕೆ 1,930 ವಯಲ್ಸ್‌ ದೊರೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT