ಬೆಂಗಳೂರು: ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಇತ್ತೀಚೆಗೆ ರಾಜೀನಾಮೆ ನೀಡಿರುವ ನಟ ಮುಖ್ಯಮಂತ್ರಿ ಚಂದ್ರು ಮಂಗಳವಾರ ಆಮ್ ಆದ್ಮಿ ಪಕ್ಷ (ಎಎಪಿ) ಸೇರಿದ್ದಾರೆ. ಈ ಕುರಿತು ಎಎಪಿಬೆಂಗಳೂರು ಘಟಕ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮಾಹಿತಿ ನೀಡಿದೆ.

ಕರ್ನಾಟಕದ ‘ಮುಖ್ಯಮಂತ್ರಿ’ ಈಗ ಆಮ್ ಆದ್ಮಿ. ನಮ್ಮ ಕುಟುಂಬಕ್ಕೆ ಸ್ವಾಗತ ಮುಖ್ಯಮಂತ್ರಿಗಳೇ, ಎಂದು ಎಎಪಿ ಟ್ವೀಟ್ ಮಾಡಿದೆ. ಜತೆಗೆ ಚಂದ್ರು ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದ ಫೇಸ್ಬುಕ್ ನೇರ ಪ್ರಸಾರದ ಲಿಂಕ್ ಅನ್ನು ಹಂಚಿಕೊಂಡಿದೆ.

ಕಾಂಗ್ರೆಸ್ ತೊರೆದ ಚಿತ್ರನಟ 'ಮುಖ್ಯಮಂತ್ರಿʼ ಚಂದ್ರು

ಚಂದ್ರು ಅವರು ಮೇ 29ರಂದು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದ ಅವರು, ವೈಯಕ್ತಿಕ ಕಾರಣಗಳಿಂದ ಪಕ್ಷ ತ್ಯಜಿಸುತ್ತಿರುವುದಾಗಿ ಹೇಳಿದ್ದರು.

‘ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಸಂದರ್ಭದಲ್ಲಿ ನೀಡಿದ್ದ ಯಾವುದೇ ಭರವಸೆಗಳನ್ನು ಕಾಂಗ್ರೆಸ್ ಈಡೇರಿಸಿಲ್ಲ. 2018ರಲ್ಲಿ ವಿಧಾನ ಪರಿಷತ್ಗೆ ನಾಮಕರಣ ಮಾಡಲು ಹೆಸರನ್ನು ಅಂತಿಮಗೊಳಿಸಿ, ಕೊನೆಯ ಕ್ಷಣದಲ್ಲಿ ಪ್ರಭಾವಿ ನಾಯಕರೊಬ್ಬರ ಹಸ್ತಕ್ಷೇಪದಿಂದ ಬದಲಾವಣೆ ಮಾಡಿದ್ದರು. ಈ ಎಲ್ಲವೂ ನನಗೆ ನೋವುಂಟು ಮಾಡಿದೆʼ ಎಂದು ಅವರು ಬೇಸರ ವ್ಯಕ್ತಪಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.