ಬೆಂಗಳೂರು: ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರ ಅಧಿಕಾರ ಚಲಾವಣೆಗೆ ನಿರ್ಬಂಧ ವಿಧಿಸಿರುವ ಚಿತ್ರದುರ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಆದೇಶ ಪ್ರಶ್ನಿಸಿದ ಮತ್ತು ಮಠಕ್ಕೆ ರಾಜ್ಯ ಸರ್ಕಾರ ಆಡಳಿತಾಧಿಕಾರಿ ನೇಮಕ ಮಾಡಿರುವುದನ್ನು ಪ್ರಶ್ನಿಸಲಾದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಏಪ್ರಿಲ್ 6ಕ್ಕೆ ಮುಂದೂಡಿದೆ.
ಈ ಸಂಬಂಧದ ಎರಡು ಪ್ರತ್ಯೇಕ ರಿಟ್ ಅರ್ಜಿಗಳು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ
ನ್ಯಾಯಪೀಠದಲ್ಲಿ ಗುರುವಾರ ವಿಚಾರಣೆ ನಿಗದಿಯಾಗಿದ್ದವು. ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಜಯಕುಮಾರ್ ಎಸ್.ಹಿರೇಮಠ ಅವರು, ‘ಪ್ರಕರಣದಲ್ಲಿ ವಾದ ಮಂಡಿಸಬೇಕಿರುವ ಹಿರಿಯ ವಕೀಲ ಸಿ.ವಿ.ನಾಗೇಶ್ ಗೈರಾಗಿರುವ ಕಾರಣ ವಿಚಾರಣೆ ಮುಂದೂಡಬೇಕು’ ಎಂದು ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ವಿಚಾರಣೆಯನ್ನು ಏಪ್ರಿಲ್ 6ಕ್ಕೆ ನಿಗದಿಪಡಿಸಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.