ಮಂಗಳವಾರ, ಜನವರಿ 18, 2022
22 °C

ಬೊಮ್ಮಾಯಿ ಬದಲಾವಣೆ ಪ್ರಶ್ನೆಯೇ ಇಲ್ಲ: ಈಶ್ವರಪ್ಪ ಹೇಳಿಕೆಗೆ ನಿರಾಣಿ ಪ್ರತಿಕ್ರಿಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಮಗೆ ಸಹಾಯ, ಸಹಕಾರ ಕೊಡುತ್ತಿದ್ದಾರೆ. ಅವರು ಬದಲಾವಣೆ ಆಗುವ ಪ್ರಶ್ನೆಯೇ ಇಲ್ಲ. ನಾವೆಲ್ಲರೂ ಒಟ್ಟಾಗಿಯೇ ಇದ್ದೇವೆ’ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹಿರಿಯರಾದ ಈಶ್ವರಪ್ಪನವರು ನಾನು ಮುಖ್ಯಮಂತ್ರಿ ಆಗುತ್ತೇನೆ ಎಂದು ಅಭಿಮಾನ ಪೂರ್ವಕವಾಗಿ  ಹೇಳಿರಬಹುದು. ಅವರು ಹಾಗೆ ಹೇಳಿದ್ದಕ್ಕೆ  ಋಣಿಯಾಗಿರುತ್ತೇನೆ. ಆದರೆ ಇಂದು ನನ್ನ ಹಿರಿಯ ಅಣ್ಣನಂತಿರುವ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿ ಒಳ್ಳೆಯ ಕೆಲಸಗಳನ್ನು ಮಾಡುತ್ತಿದ್ದಾರೆ. ಅವರಿಗೆ ಸಹಕಾರ ನೀಡುತ್ತೇನೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಓದಿ: 

‘ಬಿಜೆಪಿಯಲ್ಲಿ ಎಲ್ಲರೂ ಒಟ್ಟಾಗಿದ್ದೇವೆ. 2023ಕ್ಕೆ 150 ಸ್ಥಾನಗಳ ಗೆದ್ದು ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕು ಎನ್ನುವುದು ನಮ್ಮ ಮೊದಲ ಗುರಿ’ ಎಂದರು.

2023ರಲ್ಲಾದ್ರೂ ನಿರಾಣಿ ಸಿಎಂ ಆಗಬಹುದಾ ಎಂಬ ಪ್ರಶ್ನೆಗೆ ‘ಏನೇ ಮುಂದೆ ನನ್ನ ಸಿಎಂ ಮಾಡಿದರೂ ಸಹ ಅದು 2028ರ ನಂತರವೇ. ಪಕ್ಷದ ಹಿರಿಯರು, ನಮ್ಮ ಪರಿವಾರದ ನಾಯಕರು ಯಾವ ಜವಾಬ್ದಾರಿ ಕೊಡುತ್ತಾರೋ ಅದನ್ನು ನಿಭಾಯಿಸಲು ಸಿದ್ಧನಿದ್ದೇನೆ’ ಎಂದರು.

‘ಈ ಹಿಂದೆ ನನಗೆ ಯಾವುದೇ ಮಂತ್ರಿ ಪದವಿ ಇರಲಿಲ್ಲ. ಯಾವುದೇ ಅಸಮಾಧಾನ ವ್ಯಕ್ತಪಡಿಸದೆ ಕೆಲಸ ಮಾಡಿದೆ. ನಂತರ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹೊಣೆ ಕೊಟ್ಟರು. ಚೆನ್ನಾಗಿ ಕೆಲಸ ಮಾಡಿದೆ. ಅಲ್ಲಿ ನನ್ನ ಕೆಲಸ ಗುರುತಿಸಿ ಮತ್ತೆ ಕೈಗಾರಿಕೆ ಸಚಿವ ಸ್ಥಾನ ನೀಡಿದ್ದಾರೆ. ಪಕ್ಷ ಏನೇ ಜವಾಬ್ದಾರಿ ಕೊಟ್ಟರೂ, ಕೊಡದೇ ಇದ್ದರೂ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ’ ಎಂದು ಅವರು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು