ಮಂಗಳವಾರ, ಜನವರಿ 31, 2023
18 °C

ಮುರುಘಾ ಶರಣರು ಅಮಿತ್‌ ಶಾ, ಯಡಿಯೂರಪ್ಪ ಮುಂತಾದವರ ಜೊತೆಗಿದ್ದ ಫೋಟೊಗಳು ಕಳವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಇಲ್ಲಿನ ಮುರುಘಾ ಮಠದ ರಾಜಾಂಗಣದಲ್ಲಿದ್ದ ಶಿವಮೂರ್ತಿ ಮುರುಘಾ ಶರಣರ 47 ಫೋಟೊಗಳು ಕಳುವಾಗಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಸವಶ್ರೀ ಪ್ರಶಸ್ತಿ ಪ್ರದಾನ, ಮುರುಘಾಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಮಠಕ್ಕೆ ಭೇಟಿ ನೀಡಿದ ಗಣ್ಯರೊಂದಿಗೆ ಶಿವಮೂರ್ತಿ ಮುರುಘಾ ಶರಣರು ಇದ್ದ ಹಲವು ಫೋಟೊಗಳನ್ನು ರಾಜಾಂಗಣದಲ್ಲಿ ಹಾಕಲಾಗಿತ್ತು. ಕೇಂದ್ರ ಗೃಹ ಸಚಿವ ಅಮಿತ್ ಶಾ, ಶಾಸಕ ಬಿ.ಎಸ್. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಜೆ.ಎಚ್.ಪಟೇಲ್ ಸೇರಿದಂತೆ ಹಲವರೊಂದಿಗೆ ಮುರುಘಾಶ್ರೀ ಇದ್ದ ಚಿತ್ರಗಳು ಇಲ್ಲಿದ್ದವು. ಈ ಎಲ್ಲ ಫೋಟೊಗಳು ಅ.5ರಂದು ರಾತ್ರಿ ಕಳುವಾಗಿವೆ ಎಂದು ಎಸ್‌ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಎಸ್.ಬಿ.ವಸ್ತ್ರಮಠ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

‘ಮಠದ ರಾಜಾಂಗಣದಲ್ಲಿದ್ದ ಫೋಟೊಗಳು ಕಳುವಾಗಿರುವ ಕುರಿತು ದೂರು ಬಂದಿತ್ತು. ದೂರು ಪರಿಶೀಲಿಸಿ ಶುಕ್ರವಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು