ಗುರುವಾರ , ಜೂನ್ 30, 2022
22 °C

ಮೇಕೆದಾಟು ಪಾದಯಾತ್ರೆಗೆ ಮಠಾಧೀಶರ ಬೆಂಬಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಮೇಕೆದಾಟು ಪಾದಯಾತ್ರೆಯ ಎರಡನೇ ದಿನವಾದ ಸೋಮವಾರ ವಿವಿಧ ಮಠಾಧೀಶರು ಪಾಲ್ಗೊಂಡು ಬೆಂಬಲ ಸೂಚಿಸಿದರು.

ಚಿತ್ರದುರ್ಗದ ಮುರುಘಾ ಶರಣರ ನೇತೃತ್ವದಲ್ಲಿ ಹತ್ತಾರು ಮಠಾಧೀಶರು ಹೆಜ್ಜೆ ಹಾಕಿದರು.

ಈ ಸಂದರ್ಭ ಮಾತನಾಡಿದ ಮುರುಘಾ ಶರಣರು 'ಈ ಕಾಲಘಟ್ಟದಲ್ಲಿ ನೀರಿಗಾಗಿ ಹೋರಾಟ ಎಂಬುದು ಅನಿವಾರ್ಯ ಆಗಿದೆ. ನೀರು ನಮ್ಮೆಲ್ಲರ ಹಕ್ಕು. ಇದಕ್ಕಾಗಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಹೋರಾಟ ನಡೆದಿರುವುದು ಶ್ಲಾಘನೀಯ' ಎಂದರು.

ಸ್ವಾಮಿಗಳಾಗಿ ಸಮಾಜದ ಸಾಮಾಜಿಕ ಸ್ವಾಸ್ಥ್ಯ ಕಾಪಾಡುವುದು. ಸತ್ಕಾರ್ಯಕ್ಕೆ ಬೆಂಬಲ ನೀಡುವುದು ನಮ್ಮ ಆದ್ಯ ಕರ್ತವ್ಯ. ನಮಗೆ ಯಾವುದೇ ಪ್ರಾದೇಶಿಕ ತಾರತಮ್ಯದ ಭಾವನೆ ಇಲ್ಲ. ಜನರಿಗಾಗಿ ಈ‌ ಯೋಜನೆ ಜಾರಿ ಆಗಲೇ ಬೇಕಿದೆ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು