ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್–19: ರೂಪಾಂತರ ವೈರಾಣು ಪ್ರಕರಣ ಹೆಚ್ಚಳ

Last Updated 21 ಮೇ 2021, 19:31 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಹೊಸ ಮಾದರಿಯ ಕೊರೊನಾ ವೈರಾಣು (ಡಬಲ್‌ ಮ್ಯೂಟೆಂಟ್‌ ಬಿ.1.617) ಹೊಂದಿರುವವರ ಸಂಖ್ಯೆ ಕೂಡ ಏರಿಕೆ ಕಂಡಿದ್ದು, ಶುಕ್ರವಾರ 96 ಮಂದಿಯಲ್ಲಿ ಈ ಮಾದರಿಯ ವೈರಾಣು ದೃಡಪಟ್ಟಿದೆ.

ನೂತನ ಮಾದರಿಯ ವೈರಾಣು ಹೊಂದಿರುವವರ ಸಂಖ್ಯೆ ರಾಜ್ಯದಲ್ಲಿ 244ಕ್ಕೆ ತಲುಪಿದೆ. ಬ್ರಿಟನ್‌ ಮಾದರಿಯ ವೈರಾಣು ಮತ್ತೆ 23 ಮಂದಿಯಲ್ಲಿ ಕಾಣಿಸಿಕೊಂಡಿದೆ. ಈವರೆಗೆ ಒಟ್ಟು 109 ಕೋವಿಡ್ ಪೀಡಿತರಲ್ಲಿ ಬ್ರಿಟನ್ ಮಾದರಿಯ ವೈರಾಣು ದೃಢಪಟ್ಟಿದೆ. ರಾಜ್ಯದಲ್ಲಿ 24 ಗಂಟೆಗಳ ಅವಧಿಯಲ್ಲಿ 32,218 ಮಂದಿ ಕೋವಿಡ್‌ ಪೀಡಿತರಾಗಿರುವುದು ಖಚಿತ‍ಪಟ್ಟಿದೆ. ಈವರೆಗೆ ಸೋಂಕಿತರಾದವರ ಒಟ್ಟು ಸಂಖ್ಯೆ 23.67 ಲಕ್ಷ ದಾಟಿದೆ.

500ರ ಗಡಿ ದಾಟಿದ್ದ ಕೋವಿಡ್ ಮರಣ ಪ್ರಕರಣಗಳ ಸಂಖ್ಯೆ ಇಳಿಕೆ ಕಂಡಿದೆ. ಬೆಂಗಳೂರಿನಲ್ಲಿ 129 ಮಂದಿ ಸೇರಿದಂತೆ ರಾಜ್ಯದಲ್ಲಿ 353 ಮಂದಿ ಸಾವಿಗೀಡಾಗಿರುವುದು ದೃಢಪಟ್ಟಿದೆ. ಬೆಳಗಾವಿ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಮರಣ ಪ್ರಕರಣಗಳು ಹೊಸದಾಗಿ ವರದಿಯಾಗಿವೆ. ಬೆಂಗಳೂರು ಗ್ರಾಮಾಂತರದಲ್ಲಿ 30 ಮಂದಿ, ಬಳ್ಳಾರಿಯಲ್ಲಿ 23 ಮಂದಿ, ಉತ್ತರ ಕನ್ನಡದಲ್ಲಿ 22 ಮಂದಿ, ಶಿವಮೊಗ್ಗದಲ್ಲಿ 20 ಮಂದಿ, ತುಮಕೂರಿನಲ್ಲಿ 16 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಈವರೆಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 24,207ಕ್ಕೆ ತಲುಪಿದೆ.

ಒಂದು ದಿನದ ಅವಧಿಯಲ್ಲಿ 1.33 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ಸೋಂಕು ದೃಢ ಪ್ರಮಾಣ ಶೇ 24.22ರಷ್ಟಿದೆ. ಕೋವಿಡ್‌ನಿಂದ ಚೇತರಿಸಿಕೊಳ್ಳುವವರ ಸಂಖ್ಯೆ ಏರಿಕೆ ಕಂಡಿದ್ದು, ಮತ್ತೆ 52,581 ಮಂದಿ ಗುಣಮುಖರಾಗಿದ್ದಾರೆ. ಇದರಿಂದಾಗಿ 48 ಗಂಟೆಗಳಲ್ಲಿ 1.04ಲಕ್ಷಕ್ಕೂ ಅಧಿಕ ಮಂದಿಗೆ ಕಾಯಿಲೆ ವಾಸಿಯಾಗಿದೆ. ಕೊರೊನಾ ಸೋಂಕಿತರಲ್ಲಿ ಒಟ್ಟು 18.29 ಲಕ್ಷ ಮಂದಿ ಚೇತರಿಸಿಕೊಂಡಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 5.14 ಲಕ್ಷಕ್ಕೆ ಇಳಿಕೆಯಾಗಿದೆ.

ಬೆಂಗಳೂರಿನಲ್ಲಿ 9,591 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಮೈಸೂರು (2,355), ಹಾಸನ (2,071), ತುಮಕೂರು (1,773), ಬಳ್ಳಾರಿ (1,650), ಬೆಳಗಾವಿ (1,138) ಜಿಲ್ಲೆಯಲ್ಲಿ ಅಧಿಕ ಪ್ರಕರಣಗಳು ಹೊಸದಾಗಿ ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT