ಸೋಮವಾರ, ಮೇ 23, 2022
30 °C

ತಸ್ತೀಕ್‌ ಮೊತ್ತ ₹ 60 ಸಾವಿರಕ್ಕೆ ಹೆಚ್ಚಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿರುವ ‘ಸಿ’ ವರ್ಗದ ದೇವಾಲಯಗಳಲ್ಲಿ ಪ್ರಸ್ತುತ ವಾರ್ಷಿಕ ನೀಡುತ್ತಿರುವ ₹ 48 ಸಾವಿರ ತಸ್ತೀಕ್‌ ಅನ್ನು ಪ್ರಸಕ್ತ ಆರ್ಥಿಕ ವರ್ಷದಿಂದ ₹ 60 ಸಾವಿರಕ್ಕೆ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ.

ತಸ್ತೀಕ್‌ ಹಣ ಹೆಚ್ಚಿಸುವಂತೆ ಹಲವು ವರ್ಷಗಳಿಂದ ದೇವಸ್ಥಾನಗಳ ಅರ್ಚಕರು ಮನವಿಗಳನ್ನು ಸಲ್ಲಿಸಿದ್ದರು. ಅಗತ್ಯ ವಸ್ತುಗಳ ಬೆಲೆ ಗಣನೀಯವಾಗಿ ಹೆಚ್ಚಳ ಆಗಿರುವುದರಿಂದ ಪೂಜಾ ಕೈಂಕರ್ಯಗಳ ನಿರ್ವಹಣೆಗಾಗಿ ತಸ್ತೀಕ್‌ ಮೊತ್ತವನ್ನು ಹೆಚ್ಚಿಸುವುದಾಗಿ ಮುಜರಾಯಿ ಸಚಿವರಾದ ಶಶಿಕಲಾ ಜೊಲ್ಲೆ ಭರವಸೆ ನೀಡಿದ್ದರು. ಅದಕ್ಕೆ ಪೂರಕವಾಗಿ ಬಜೆಟ್‌ ಭಾಷಣದಲ್ಲಿ ಮುಖ್ಯಮಂತ್ರಿ ಘೋಷಿಸಿದ್ದರು.

‘ಅರ್ಚಕರ ಪರಿಸ್ಥಿತಿ ಗಮನಿಸಿ, ತಸ್ತೀಕ್‌ ಹಣ ಹೆಚ್ಚಿಸುವಂತೆ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗಿತ್ತು. ಇದಕ್ಕೆ ಅವರು ಸ್ಪಂದಿಸಿದ್ದಾರೆ. ಅರ್ಚಕರ ಬಹುದಿನಗಳ ಬೇಡಿಕೆ ಈಡೇರಿದೆ’ ಎಂದು ಸಚಿವರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.