ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು–ಮೈಸೂರು ಹೆದ್ದಾರಿ: ದಶಪಥ ಕಾಮಗಾರಿ ಉದ್ಘಾಟನೆ ಮುಂದಕ್ಕೆ

Last Updated 15 ಆಗಸ್ಟ್ 2022, 21:25 IST
ಅಕ್ಷರ ಗಾತ್ರ

ರಾಮನಗರ: ಬೆಂಗಳೂರು–ಮೈಸೂರು ದಶಪಥ ಹೆದ್ದಾರಿ ಕಾಮಗಾರಿಯ ಭಾಗಶಃ ಉದ್ಘಾಟನೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ.

ಮಂಡ್ಯ ಜಿಲ್ಲೆಯ ನಿಡಘಟ್ಟದಿಂದ ಬೆಂಗಳೂರಿನ ಕ್ರೈಸ್ಟ್ ಕಾಲೇಜುವರೆಗೆ ಸುಮಾರು 51 ಕಿ.ಮೀ. ಉದ್ದದ ಹೆದ್ದಾರಿ ಕಾಮಗಾರಿ ಬಹುತೇಕ ಮುಕ್ತಾಯ ಹಂತದಲ್ಲಿದೆ. ಇದನ್ನು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಸೋಮವಾರದಿಂದ ಸಾರ್ವಜನಿಕರ ಓಡಾಟಕ್ಕೆ ಮುಕ್ತಗೊಳಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಯೋಜಿಸಿತ್ತು. ಆದರೆ, ದೆಹಲಿಯಿಂದ ರಸ್ತೆ ಸುರಕ್ಷತೆ ವಿಭಾಗದ ಅಧಿಕಾರಿಗಳ ತಂಡವು ಪರಿಶೀಲನೆ ನಡೆಸಿ ಹಸಿರು ನಿಶಾನೆ ತೋರಿಲ್ಲ. ಈ ಹಿನ್ನೆಲೆಯಲ್ಲಿ ವಿಳಂಬ ಆಗಿದೆ ಎಂದು ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದೇ ಹೊಸ ದಾರಿಯಲ್ಲಿ ನಿಡಘಟ್ಟದಿಂದ ಕ್ರೈಸ್ಟ್‌ ಕಾಲೇಜುವರೆಗೆ ಸಂಚಾರ ಕೈಗೊಂಡು ಕಾಮಗಾರಿ ಪರಿಶೀಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT