ಬೆಂಗಳೂರು: ‘ಕೋವಿಡ್ ಕಾರಣ ಈ ಬಾರಿ ದಸರಾ ಮಹೋತ್ಸವವನ್ನು ಸರಳವಾಗಿ ಆಚರಿಸಲಾಗುವುದು’ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಉನ್ನತ ಮಟ್ಟದ ಸಮಿತಿ ಸಭೆಯ ಬಳಿಕ ಮಾತನಾಡಿದ ಅವರು, ಸಾಂಪ್ರದಾಯಿಕ ಆಚರಣೆಯನ್ನು ಕೈ ಬಿಡದೆ, ವೈಭವಕ್ಕೆ ಕಡಿವಾಣ ಹಾಕುವುದು ಸೂಕ್ತ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿರುವುದರಿಂದ ಹೆಚ್ಚಿನ ಜನಸಂದಣಿ ಸೇರದಂತೆ ಸಾಂಕೇತಿಕ ಆಚರಣೆಗೆ ಮಾತ್ರ ಅವಕಾಶ ನೀಡಲಾಗುವುದು ಎಂದರು.

ದಸರಾ ಆಚರಣೆಗೆ 10 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗುವುದು. ಆಹಾರ ಮೇಳ, ಕ್ರೀಡೆ, ಯುವ ದಸರಾ ಮುಂತಾದ ಕಾರ್ಯಕ್ರಮಗಳನ್ನು ಈ ಬಾರಿ ಕೈಬಿಡಲಾಗುವುದು. ಗಜಪಡೆಯನ್ನು ಸಹ ಕನಿಷ್ಟ 5ಕ್ಕೆ ಸೀಮಿತಗೊಳಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ಹೇಳಿದರು.

ನಾಡದೇವತೆ ಚಾಮುಂಡೇಶ್ವರಿಯ ಅಗ್ರಪೂಜೆ ಮತ್ತು ದಸರಾ ಉದ್ಘಾಟನೆಯನ್ನು ಕೋವಿಡ್ ಗಾಗಿ ಶ್ರಮಿಸಿರುವ ಕೊರೊನಾ ಸೇನಾನಿಗಳಾದ ವೈದ್ಯರು, ನರ್ಸ್, ಆಶಾ ಕಾರ್ಯಕರ್ತರು, ಪೌರ ಕಾರ್ಮಿಕರು ಹಾಗೂ ಪೊಲೀಸರಿಂದ ನೆರವೇರಿಸಲಾಗುವುದು ಎಂದರು.

ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಿದ್ಯುಕ್ತವಾಗಿ ಪೂಜೆ ನೆರವೇರಿಸಿ, 5-6 ಆನೆಗಳನ್ನು ಮಾತ್ರ ಬಳಸಿ, ಜಂಬೂ ಸವಾರಿಯನ್ನು ಅರಮನೆ ಆವರಣದಲ್ಲಿ ಮಾತ್ರ ನಡೆಸುವುದು.ಮೈಸೂರು ನಗರದಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲು ತೀರ್ಮಾನಿಸಲಾಯಿತು ಎಂದರು.

ಪ್ರಧಾನಮಂತ್ರಿ ಆತ್ಮನಿರ್ಭರ್ ಭಾರತ ಪರಿಕಲ್ಪನೆಯಂತೆ ಚೀನಿ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಬಾರದು. ದೇಶೀ ಉತ್ಪನ್ನಗಳಿಗೆ ಆದ್ಯತೆ ನೀಡಬೇಕೆಂದು ಮುಖ್ಯ ಮಂತ್ರಿ ಸೂಚಿಸಿದರು.

ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ: ಸಿ.ಎಸ್.ಅಶ್ವತ್ಥ್ ನಾರಾಯಣ್, ಲಕ್ಷ್ಮಣ ಸವದಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಸಿ.ಟಿ. ರವಿ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಸಂಸದರಾದ ಸುಮಲತಾ ಅಂಬರೀಶ್ ಮತ್ತು ಪ್ರತಾಪ್ ಸಿಂಹ, ಶಾಸಕರು, ಕೆ.ಎಸ್.ಟಿ. ಡಿ.ಸಿ ಅಧ್ಯಕ್ಷೆ ಶ್ರುತಿ, ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್, ಮೈಸೂರು ಜಿಲ್ಲಾಧಿಕಾರಿ ಸಭೆಯಲ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.