ಬುಧವಾರ, ಜೂನ್ 23, 2021
28 °C

ಮೈಸೂರು ದಸರಾ ಮಹೋತ್ಸವ ಸರಳ ಆಚರಣೆ: ಬಿ.ಎಸ್. ಯಡಿಯೂರಪ್ಪ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

BS Yediyurappa

ಮೈಸೂರು: ಮೈಸೂರು ದಸರಾ ಮಹೋತ್ಸವ ಈ ಭಾರಿಯೂ ನಡೆಯಲಿದೆ. ಆದರೆ ಸರಳವಾಗಿ ಯಾವ ರೀತಿ ಆಚರಿಸಬೇಕೆಂದು ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಕಬಿನಿಗೆ ಬಾಗಿನ ಅರ್ಪಿಸಿದ ಬಳಿಕ ಬೀಚನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ದಸರಾ ಮಹೋತ್ಸವವನ್ನು ಸರಳವಾಗಿ ಆಚರಣೆ ಮಾಡಬೇಕು ಅಂತ ತೀರ್ಮಾನ ಮಾಡಿದ್ದೇವೆ. ದಸರಾ ರೂಪುರೇಷೆ ಬಗ್ಗೆ ಮುಂದಿನ ದಿನಗಳಲ್ಲಿ ಚರ್ಚೆ ಮಾಡುತ್ತೇವೆ.  ದಸರಾ ಉನ್ನತ ಮಟ್ಟದ ಸಮಿತಿ‌ ಸಭೆಗೆ ಶೀರ್ಘದಲ್ಲೇ ದಿನಾಂಕ ನಿಗದಿ ಮಾಡುತ್ತೇವೆ ಎಂದರು. 

ಕಾವೇರಿ ತಾಯಿಯ ಪೂಜೆ ಮಾಡಿ ಬಾಗಿನ ಅರ್ಪಿಸಲಾಗಿದೆ. ಕಬಿನಿಯಲ್ಲಿ ಮತ್ತೆ ಐದನೇ ವರ್ಷಕ್ಕೆ ಬಾಗಿನ ಅರ್ಪಿಸಲು ಸೌಭಾಗ್ಯ ನನಗೆ ಸಿಕ್ಕಿದೆ. ಇಂದು ರಾಜ್ಯದ ಎಲ್ಲ ಜಲಾಶಯಗಳಲ್ಲೂ ತುಂಬಿ ತುಳುಕುತ್ತಿದ್ದು, ಅಂತರ್ಜಲ ಕುಸಿಯುವುದು ತಪ್ಪಿದೆ. ಈ ಬಾರಿ ನಿರೀಕ್ಷೆಗೂ ಮೀರಿ ಉತ್ತಮ ಮಳೆ ಕಾಣುತ್ತಿದೆ. ಪ್ರತಿವರ್ಷವೂ ಇದೇ ರೀತಿಯಲ್ಲಿ ಮಳೆ-ಬೆಳೆಯಾಗಲಿ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು