ಸೋಮವಾರ, ಸೆಪ್ಟೆಂಬರ್ 27, 2021
28 °C

ಮೈಸೂರು: ಅ.7 ರಂದು ದಸರಾ ಮಹೋತ್ಸವದ ಉದ್ಘಾಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ದಸರಾ ಮಹೋತ್ಸವದ ಉದ್ಘಾಟನೆ ಅ.7 ರಂದು ಬೆಳಿಗ್ಗೆ 8.15 ರಿಂದ 8.45 ರೊಳಗಿನ ಶುಭಮುಹೂರ್ತದಲ್ಲಿ ಚಾಮುಂಡಿಬೆಟ್ಟದಲ್ಲಿ ನಡೆಯಲಿದೆ.

ಅ.15 ರಂದು ವಿಜಯದಶಮಿ ದಿನ ಸಂಜೆ 4.36 ರಿಂದ 4.46ರ ಅವಧಿಯಲ್ಲಿ ನಂದಿಧ್ವಜ ಪೂಜೆ ನಡೆಯಲಿದೆ. 5.00 ರಿಂದ 5.30ರ ಒಳಗೆ ಜಂಬೂ ಸವಾರಿ ನಡೆಯಲಿದ್ದು, ಅರಮನೆ ಆವರಣಕ್ಕೆ ಮಾತ್ರ ಸೀಮಿತವಾಗಿರಲಿದೆ. ಜಂಬೂ ಸವಾರಿಯಲ್ಲಿ ಎಂಟು ಆನೆಗಳು ಪಾಲ್ಗೊಳ್ಳಲಿವೆ.

ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ದಸರಾ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಯಿತು.

‘ದಸರಾ ಉದ್ಘಾಟಕರು ಯಾರು ಎಂಬುದನ್ನು ತೀರ್ಮಾನಿಸುವ ಅಧಿಕಾರ ಮುಖ್ಯಮಂತ್ರಿಗೆ ನೀಡಲಾಗಿದೆ. ನವರಾತ್ರಿಯ ಎಲ್ಲಾ ದಿನ ಅರಮನೆ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ’ ಎಂದು ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಸೋಮಶೇಖರ್‌ ತಿಳಿಸಿದರು.

ಸೆ.16 ರಂದು ಗಜಪಡೆಗೆ ಸ್ವಾಗತ: ‘ದಸರಾ ಉತ್ಸವದಲ್ಲಿ ಪಾಲ್ಗೊಳ್ಳಲಿರುವ ಗಜಪಡೆಯನ್ನು ಸೆ.16 ರಂದು ಬೆಳಿಗ್ಗೆ 8.36ಕ್ಕೆ ಅರಮನೆಗೆ ಸ್ವಾಗತಿಸಲಾಗುವುದು. ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿಯಲ್ಲಿ ಸೆ.13 ರಂದು ಗಜಪಯಣ ಕಾರ್ಯಕ್ರಮ ಸರಳವಾಗಿ ನಡೆಯಲಿದೆ’ ಎಂದು ಮಾಹಿತಿ ನೀಡಿದರು.

ಅಂಬಾರಿ ಹೊರಲಿರುವ ಅಭಿಮನ್ಯು ಅಲ್ಲದೆ ಅಶ್ವತ್ಥಾಮ, ಧನಂಜಯ, ವಿಕ್ರಮ, ಕಾವೇರಿ, ಚೈತ್ರಾ, ಲಕ್ಷ್ಮಿ ಮತ್ತು ಗೋ‍ಪಾಲಸ್ವಾಮಿ ಆನೆಗಳು ಭಾಗಿಯಾಗಲಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು