ಸೋಮವಾರ, ಜೂನ್ 27, 2022
25 °C

ಮೈಸೂರು ಸ್ಯಾಂಡಲ್ ಸೋಪ್‌ ನಕಲು: ಆಕ್ಷೇಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಮೈಸೂರು ಸ್ಯಾಂಡಲ್ ಸೋಪ್‌ನ ಆಕಾರ ಮತ್ತು ಪೊಟ್ಟಣವನ್ನು ಕೇರಳ ಸೋಪ್ ಆ್ಯಂಡ್ ಆಯಿಲ್ಸ್ ನಕಲು ಮಾಡಿದೆ ಎಂದು ಕನ್ನಡ ಗೆಳೆಯರ ಬಳಗ ಆರೋಪಿಸಿದೆ.

‘ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ತಯಾರಿಸುವ ಮೈಸೂರು ಸ್ಯಾಂಡಲ್ ಸೋಪು ವಿದೇಶದಲ್ಲಿ ಕೂಡ ಜನಮನ್ನಣೆ ಪಡೆದಿದೆ. 2006ರಲ್ಲಿ ಭೌಗೋಳಿಕ ಕುರುಹು ದೊರೆತಿದೆ. ಕೇರಳ ಸ್ಯಾಂಡಲ್ ಸೋಪು ಕೂಡ ಮೈಸೂರು ಸ್ಯಾಂಡಲ್ ಸೋಪಿನ ಮಾದರಿಯಲ್ಲಿಯೇ ಇದೆ. ಆದರೆ, ಇದನ್ನು ಪ್ರಶ್ನಿಸಬೇಕಾಗಿದ್ದ ರಾಜ್ಯದ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕರ್ನಾಟಕ ಸಾಬೂನು ಮತ್ತು ಮಾರ್ಜಕ ಸಂಸ್ಥೆ ತಟಸ್ಥವಾಗಿದೆ. ಇದು ಖಂಡನೀಯ’ ಎಂದು ಬಳಗದ ಸಂಚಾಲಕ ರಾ.ನಂ. ಚಂದ್ರಶೇಖರ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು