ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಪಿಎಸ್‌ಸಿಯಿಂದ FDA ನೌಕರಿ ಕೊಡಿಸುವ ಆಮಿಷ: ಮೈಸೂರು ಪಿಎಸ್‌ಐ ಅಶ್ವಿನಿ ಅಮಾನತು

Last Updated 19 ಸೆಪ್ಟೆಂಬರ್ 2022, 10:36 IST
ಅಕ್ಷರ ಗಾತ್ರ

ಮೈಸೂರು: ಪ್ರಥಮ ದರ್ಜೆ ಸಹಾಯಕರ ಹುದ್ದೆ ಕೊಡಿಸಲು ಅವ್ಯವಹಾರ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಇಲ್ಲಿನ ನರಸಿಂಹರಾಜ ಸಂಚಾರ ಪೊಲೀಸ್‌ ಠಾಣೆಯ ಪಿಎಸ್‌ಐ ಅಶ್ವಿನಿ ಅನಂತಪುರ ಅವರನ್ನು ಅಮಾನತುಗೊಳಿಸಿ ನಗರ ಪೊಲೀಸ್‌ ಆಯುಕ್ತರು ಸೋಮವಾರ ಆದೇಶ ಹೊರಡಿಸಿದ್ದಾರೆ.

ಕೆಪಿಎಸ್‌ಸಿ ಎಫ್‌ಡಿಎ ನೇಮಕಾತಿ ಪ್ರಕ್ರಿಯೆಯಲ್ಲಿ ಬಸವರಾಜು ಎಂಬುವರಿಗೆ ಹುದ್ದೆ ಕೊಡಿಸಲು ಬಾಗಲಕೋಟೆ ಜಿಲ್ಲೆಯ ಸಂಗಮೇಶ ಝಳಕಿ ಎಂಬುವರ ಜೊತೆ ಆರೋಪಿ ಪಿಎಸ್‌ಐ ಮಾತನಾಡಿದ್ದೆನ್ನಲಾದ ಮೊಬೈಲ್‌ ಹಾಗೂ ವಾಟ್ಸ್‌ಆ್ಯಪ್‌ ಆಡಿಯೊ ಸಂಭಾಷಣೆಗಳು ಜಾಲತಾಣಗಳಲ್ಲಿ ವೈರಲ್‌ ಆಗಿದ್ದವು. ಅಲ್ಲದೆ, ಹಣ ಅಕ್ರಮ ವರ್ಗಾವಣೆಯ ಬ್ಯಾಂಕ್‌ ಸ್ಟೇಟ್‌ಮೆಂಟ್‌ ಕೂಡ ಮಾಧ್ಯಮಗಳಲ್ಲಿ ಬಿತ್ತರಗೊಂಡಿತ್ತು.

ಈ ಬಗ್ಗೆ ನಗರ ಅಪರಾಧ ವಿಭಾಗದ ಎಸಿಪಿ ಪ್ರಾಥಮಿಕ ತನಿಖೆ ನಡೆಸಿದ್ದು, ಆರೋಪಗಳು ಮೇಲ್ನೋಟಕ್ಕೆ ನೈಜವೆಂದು ತಿಳಿದು ಬಂದ ಹಿನ್ನೆಲೆಯಲ್ಲಿ ಪಿಎಸ್‌ಐ ಅಶ್ವಿನಿ ಅವರನ್ನು ಅಮಾನತು ಮಾಡಲಾಗಿದೆ.

‘ಗುರುತರ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದ್ದು, ನಗರ ಅಪರಾಧ ವಿಭಾಗದ ಎಸಿಪಿ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ’ ಎಂದು ನಗರ ಪೊಲೀಸ್‌ ಕಮಿಷನರ್‌ ಡಾ.ಚಂದ್ರಗು‍ಪ್ತ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT