ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಎನ್.ಭೃಂಗೀಶ್ ನೇಮಕ

ಬೆಂಗಳೂರು: ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರನ್ನಾಗಿ ವಾರ್ತಾ ಇಲಾಖೆಯ ನಿವೃತ್ತ ನಿರ್ದೇಶಕ ಎನ್. ಭೃಂಗೀಶ್ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.
ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿಯೂ ಆಗಿದ್ದ ಅವರು ಇತ್ತೀಚೆಗಷ್ಟೇ ಸೇವೆಯಿಂದ ನಿವೃತ್ತರಾಗಿದ್ದರು.
ಈ ಹಿಂದೆ ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರರಾಗಿದ್ದ ಮಹಾದೇವ ಪ್ರಕಾಶ್ ಅವರು ನವೆಂಬರ್ 19ರಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು.
ಕಳೆದ ಒಂದು ವರ್ಷದಿಂದ ಅವರು ಮಾಧ್ಯಮ ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದರು. ವೈಯಕ್ತಿಕ ಕಾರಣಗಳಿಗಾಗಿ ರಾಜೀನಾಮೆ ನೀಡಿರುವುದಾಗಿ ಅವರು ತಿಳಿಸಿದ್ದು, ರಾಜೀನಾಮೆ ಪತ್ರವನ್ನು ಅವರು ಮುಖ್ಯಮಂತ್ರಿಯವರಿಗೆ ಕಳುಹಿಸಿದ್ದರು.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.